ಹರ್ಯಾಣದ ಹುತಾತ್ಮ ಯೋಧನ ಅಂತ್ಯಕ್ರಿಯೆಗೆ ಸಹಕರಿಸಿ: ಜಾಟ್ ಸಮುದಾಯಕ್ಕೆ ಸೇನೆ ಮನವಿ
ಹುತಾತ್ಮ ಯೋಧ ಕ್ಯಾಪ್ಟನ್ ಪವನ್ ಕುಮಾರ್ ಅವರ ಅಂತ್ಯ ಸಂಸ್ಕಾರ ಯೋಗ್ಯವಾದ ರೀತಿಯಲ್ಲಿ ನಡೆಸುವುದಕ್ಕೆ ಸಹಕಾರ ನೀಡಬೇಕೆಂದು ಸೇನೆ ಹರ್ಯಾಣಾದ ಜಾಟ್ ಸಮುದಾಯಕ್ಕೆ ಮನವಿ ಮಾಡಿದೆ.

ನವದೆಹಲಿ: ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಜಮ್ಮು-ಕಾಶ್ಮೀರದಲ್ಲಿ ಹುತಾತ್ಮ ಯೋಧ ಕ್ಯಾಪ್ಟನ್ ಪವನ್ ಕುಮಾರ್ ಅವರ ಅಂತ್ಯ ಸಂಸ್ಕಾರ ಯೋಗ್ಯವಾದ ರೀತಿಯಲ್ಲಿ ನಡೆಸುವುದಕ್ಕೆ ಸಹಕಾರ ನೀಡಬೇಕೆಂದು ಸೇನೆ ಹರ್ಯಾಣಾದ ಜಾಟ್ ಸಮುದಾಯಕ್ಕೆ ಮನವಿ ಮಾಡಿದೆ.
ಮೀಸಲಾತಿಗೆ ಆಗ್ರಹಿಸಿ ಹರ್ಯಾಣದಲ್ಲಿ ಜಾಟ್ ಸಮುದಾಯದವರು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವ ಹಿನ್ನೆಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಹುತಾತ್ಮ ಯೋಧ ಪವನ್ ಕುಮಾರ್ ಹರ್ಯಾಣದ ಜಿಂದ್ ಜಿಲ್ಲೆಯವರಾಗಿರುವುದರಿಂದ ಅವರ ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ ನಡೆಸುವುದಕ್ಕೆ ಜಾಟ್ ಸಮುದಾಯದ ಪ್ರತಿಭಟನೆ ಯಾವುದೇ ರೀತಿಯಲ್ಲೂ ಅಡ್ಡಿಯಾಗಬಾರದು ಎಂದು ಸೇನೆ ಮನವಿ ಮಾಡಿದೆ.
"ಹುತಾತ್ಮ ಯೋಧ ಕ್ಯಾಪ್ಟನ್ ಪವನ್ ಕುಮಾರ್ ಸ್ಪೂರ್ತಿದಾಯಕ ನಾಯಕ. ಈ ಹಿಂದೆ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ನಡೆಸುವಾಗ ಗಾಯಗೊಂಡಿದ್ದರಾದರೂ, ಸ್ವಯಂ ಪ್ರೇರಿತರಾಗಿ ಮತ್ತಷ್ಟು ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದ್ದರು. ಫೆ.22 ರಂದು ಕ್ಯಾಪ್ಟನ್ ಪವನ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಜಿಂದ್ ಗೆ ತರಲಾಗುತ್ತಿದೆ. ಹರ್ಯಾಣದಲ್ಲಿ ಜಾಟ್ ಸಮುದಾಯದವರು ಮೀಸಲಾತಿಗಾಗಿ ನಡೆಸುತ್ತಿರುವ ಪ್ರತಿಭಟನೆ ವಿಕೋಪಕ್ಕೆ ತಿರುಗಿದ್ದು ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಹರ್ಯಾಣ ನೆಲದ ವೀರ ಯೋಧನ ಅಂತ್ಯಕ್ರಿಯೆ ಯೋಗ್ಯವಾದ ರೀತಿಯಲ್ಲಿ ನಡೆಸಲು ಅಲ್ಲಿನ ಜನತೆ ಸಹಕರಿಸಬೇಕು" ಎಂದು ರಕ್ಷಣಾ ಸಚಿವಾಲಯದ ವಕ್ತಾರ ಕರ್ನಲ್ ಎಸ್ ಡಿ ಗೋಸ್ವಾಮಿ ಹೇಳಿಕೆ ನೀಡಿದ್ದಾರೆ. .
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


