ಜಾಟ್ ಪ್ರತಿಭಟನೆ: ರೈಲು ಟಿಕೆಟ್ ನ್ನು ಕಾದಿರಿಸಿದ್ದವರಿಗೆ ಹಣ ಮರುಪಾವತಿ
ರೈಲುಗಳು ಸಂಚಾರ ರದ್ದುಗೊಂಡಿದ್ದ ಹಿನ್ನೆಲೆಯಲ್ಲಿ ರೈಲು ಟಿಕೆಟ್ ನ್ನು ಕಾದಿರಿಸಿದ್ದ ಪ್ರಯಾಣಿಕರಿಗೆ ಪೂರ್ಣ ಮೊತ್ತವನ್ನು ಮರುಪಾವತಿ ಮಾಡುವುದಾಗಿ ರೈಲ್ವೆ ಇಲಾಖೆ ಹೇಳಿದೆ.

ಚಂಡೀಗಢ: ಹರ್ಯಾಣದಲ್ಲಿ ಜಾಟ್ ಸಮುದಾಯದವರ ಪ್ರತಿಭಟನೆ ಪರಿಣಾಮ ರೈಲುಗಳು ಸಂಚಾರ ರದ್ದುಗೊಂದಿದ್ದ ಹಿನ್ನೆಲೆಯಲ್ಲಿ ರೈಲು ಟಿಕೆಟ್ ನ್ನು ಕಾದಿರಿಸಿದ್ದ ಪ್ರಯಾಣಿಕರಿಗೆ ಪೂರ್ಣ ಮೊತ್ತವನ್ನು ಮರುಪಾವತಿ ಮಾಡುವುದಾಗಿ ರೈಲ್ವೆ ಇಲಾಖೆ ಹೇಳಿದೆ.
ರೈಲು ಟಿಕೆಟ್ ಕಾದಿರಿಸಿದ್ದವರಿಗೆ ರೈಲ್ವೆ ಇಲಾಖೆ ಹಣ ಕಡಿತ ಇಲ್ಲದೇ ಸಂಪೂರ್ಣ ಹಣವನ್ನು ವಾಪಸ್ ನೀಡಲಿದೆ ಎಂದು ರೈಲ್ವೆ ಇಲಾಖೆ ವಕ್ತಾರರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆನ್ ಲೈನ್ ಮೂಲಕ ಟಿಕೆಟ್ ಕಾದಿರಿಸಿದ್ದವರ ಖಾತೆಗೆ ವಾಪಸ್ ಹಣ ಬರಲಿದೆ. ಪೇಪರ್ ಟಿಕೆಟ್ ಖರೀದಿಸಿದ್ದವರು, ರಿಸರ್ವೇಶನ್ ಕೇಂದ್ರದಿಂದಲೇ ಹಣ ವಾಪಸ್ ಪಡೆಯಬೇಕು ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಜಾಟ್ ಸಮುದಾಯದ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿ ಅಂಬಾಲ- ಚಂಡೀಗಢ ರೈಲು ರದ್ದುಗೊಂಡಿದ್ದ ಹಿನ್ನೆಲೆಯಲ್ಲಿ ಫೆ.22 ರಂದು ಸಂಜೆ ಚಂಡೀಗಢದಿಂದ ದೆಹಲಿಗೆ ವಿಶೇಷ ರೈಲು ವ್ಯವಸ್ಥೆ ಕಲ್ಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


