ಜವಹರಲಾಲ್ ನೆಹರು ವಿವಿಯಲ್ಲಿ ಪ್ರತಿದಿನ 3 ಸಾವಿರ ಬಳಕೆಯಾದ ಕಾಂಡೋಮ್ ಪತ್ತೆ: ಬಿಜೆಪಿ ಶಾಸಕ
ವಿವಾದದ ಕೇಂದ್ರಬಿಂದುವಾಗಿ ಮಾರ್ಪಟ್ಟಿರುವ ದೆಹಲಿಯ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಪ್ರತಿದಿನ 3 ಸಾವಿರ ಬಳಕೆಯಾದ ಕಾಂಡೋಮ್‌ಗಳು...

ಅಲವಾರ್: ವಿವಾದದ ಕೇಂದ್ರಬಿಂದುವಾಗಿ ಮಾರ್ಪಟ್ಟಿರುವ ದೆಹಲಿಯ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಪ್ರತಿದಿನ 3 ಸಾವಿರ ಬಳಕೆಯಾದ ಕಾಂಡೋಮ್‌ಗಳು ಹಾಗೂ 500 ಗರ್ಭ ನಿರೋಧಕ ಇಂಜೆಕ್ಷನ್‌ಗಳು, 10 ಸಾವಿರ ಸಿಗರೇಟ್ ತುಂಡುಗಳು ಪತ್ತೆಯಾಗುತ್ತವೆ ಎಂದು ರಾಜಸ್ಥಾನದ ಬಿಜೆಪಿ ಶಾಸಕ ಜ್ಞಾನದೇವ್ ಅಹುಜಾ ಆರೋಪಿದ್ದಾರೆ.
ಅಲವಾರ್‌ನಲ್ಲಿ ಮಾತನಾಡಿದ ಅವರು ಜೆಎನ್‌ಯುನಲ್ಲಿ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಬೆತ್ತಲೆ ನೃತ್ಯ ಮಾಡುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕ್ಯಾಂಪಸ್‌ನಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ ದೇಶದ್ರೋಹಿ ಆರೋಪಿಗಳನ್ನು ಬೆಂಬಲಿಸುವವರು ಈ ದೇಶದಲ್ಲಿ ವಾಸಿಸಲು ಯೋಗರಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಶಾಸಕ ಜ್ಞಾನದೇವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


