ಜಾಟ್ ಪ್ರತಿಭಟನೆ: ಹರಿಯಾಣ ಸಿಎಂಗೆ ರೋಹ್ತಕ್ ಗ್ರಾಮಸ್ಥರಿಂದ ತರಾಟೆ
ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಜಾಟ್ ಸಮುದಾಯದ ನಾಯಕರು ಹರಿಯಾಣ ಮುಖ್ಯಮಂತ್ರಿ....

Published On :
ನವದೆಹಲಿ: ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಜಾಟ್ ಸಮುದಾಯದ ನಾಯಕರು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಕಾರಿಗೆ ಮುತ್ತಿಗೆ ಹಾಕಿ, ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ಮಂಗಳವಾರ ರೋಹ್ತಕ್ ನಲ್ಲಿ ನಡೆದಿದೆ.
ಖಟ್ಟರ್ ಅವರು ಇಂದು ಜಾಟ್ ಪ್ರಾಬಲ್ಯವಿರುವ ರೋಹ್ತಕ್ ಜಿಲ್ಲೆಗೆ ಭೇಟಿ ನೀಡಿದರು. ಈ ವೇಳೆ ಅವರ ಕಾರಿಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು, ಹರಿಯಾಣ ಪೊಲೀಸ್ ಮುರ್ದಾಬಾದ್ ಎಂದು ಘೋಷಣೆ ಕೂಗಿದರು. ಹಿಂಸಾಚಾರ ನಿಯಂತ್ರಿಸುವಲ್ಲಿ ಪೊಲೀಸರು ವಿಫಲವಾಗಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ ಖಟ್ಟರ್ ಅವರಿಗೆ ಕಪ್ಪು ಭಾವುಟ ಪ್ರದರ್ಶಿಸಲಾಯಿತು.
ಇನ್ನು ಈ ವೇಳೆ ಮಾತನಾಡಿದ ಹರಿಯಾಣ ಸಿಎಂ, ಸಂಪೂರ್ಣ ಘಟನೆಗಳ ಬಗ್ಗೆ ಪರಿಶೀಲಿಸಲು ಸಮಿತಿಯೊಂದನ್ನು ರಚಿಸಲಾಗುವುದು. ಲೋಪದೋಷ ಎಸಗಿದ ಯಾರೇ ಆಗಿದ್ದರೂ ಅವರನ್ನು ಶಿಕ್ಷಿಸಲಾಗುವುದು. ಚಳವಳಿ ಸಂದರ್ಭದಲ್ಲಿ ಆಸ್ತಿಪಾಸ್ತಿಗೆ ಹಾನಿ ಉಂಟು ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಅಲ್ಲದೆ ಚಳವಳಿ ಕಾಲದಲ್ಲಿ ನಡೆದದ್ದೆಲ್ಲವೂ ಷಡ್ಯಂತ್ರದ ಭಾಗ ಎಂದು ಅವರು ನುಡಿದರು.
ಈ ಮಧ್ಯೆ ಮೀಸಲಾತಿ ಚಳವಳಿ ಬಗ್ಗೆ ವಿವರ ನೀಡಲು ದೆಹಲಿಗೆ ಆಗಮಿಸುವಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಎಂ. ವೆಂಕಯ್ಯ ನಾಯ್ಡು ಅವರು ಮನೋಹರ್ ಲಾಲ್ ಖಟ್ಟರ್, ಕೃಷಿ ಸಚಿವ ಒಪಿ ಧನ್ಕರ್ ಮತ್ತು ರಾಜ್ಯ ಹಣಕಾಸು ಸಚಿವ ಕ್ಯಾಪ್ಟನ್ ಅಭಿಮನ್ಯು ಅವರಿಗೆ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


