ದೇಶ

ಉಮರ್ ಖಲೀದ್ ಗೆ ರಕ್ಷಣೆ ನೀಡಲು ಹೈಕೋರ್ಟ್ ನಕಾರ, ಶರಣಾಗುವಂತೆ ಜೆಎನ್​ಯುು ವಿದ್ಯಾರ್ಥಿಗಳಿಗೆ ಸೂಚನೆ

ದೇಶ ದ್ರೋಹದ ಆರೋಪ ಎದುರಿಸುತ್ತಿರುವ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್​ಯುು) ವಿದ್ಯಾರ್ಥಿಗಳಾದ ಉಮರ್ ಖಲೀದ್ ಹಾಗೂ ಅನಿರ್ಬನ್...

ಉಮರ್ ಖಲೀದ್ ಗೆ ರಕ್ಷಣೆ ನೀಡಲು ಹೈಕೋರ್ಟ್ ನಕಾರ, ಶರಣಾಗುವಂತೆ ಜೆಎನ್​ಯುು ವಿದ್ಯಾರ್ಥಿಗಳಿಗೆ ಸೂಚನೆ
ದೇಶದ ದ್ರೋಹದ ಆರೋಪ ಎದುರಿಸುತ್ತಿರುವ ವಿದ್ಯಾರ್ಥಿಗಳು
Published On :
ನವದೆಹಲಿ: ದೇಶ ದ್ರೋಹದ ಆರೋಪ ಎದುರಿಸುತ್ತಿರುವ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್​ಯುು) ವಿದ್ಯಾರ್ಥಿಗಳಾದ ಉಮರ್ ಖಲೀದ್ ಹಾಗೂ ಅನಿರ್ಬನ್ ಭಟ್ಟಾಚಾರ್ಯ ಅವರಿಗೆ ಬಂಧನ ವಿರುದ್ಧ ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿರುವ ದೆಹಲಿ ಹೈಕೋರ್ಟ್, ಪೊಲೀಸರ ಮುಂದೆ ಶರಣಾಗುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದೆ.
ಪೊಲೀಸರಿಗೆ ಶರಣಾಗುವ ಮುನ್ನ ತಮಗೆ ಪೊಲೀಸ್ ರಕ್ಷಣೆ ಕೋರಿ ಉಮರ್ ಖಲೀದ್  ಹಾಗೂ ಅನಿರ್ಬನ್ ಭಟ್ಟಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿ, ತಮ್ಮ ಆಯ್ಕೆಯ ಸ್ಥಳದಲ್ಲಿ ಪೊಲೀಸರಿಗೆ ಶರಣಾಗತರಾಗುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದೆ. ಆದರೆ ಪೊಲೀಸರು ಈ ಸಲಹೆಯನ್ನು ವಿರೋಧಿಸಿದ್ದಾರೆ.
ಬಂಧನದ ವಿರುದ್ಧ ರಕ್ಷಣೆ ನೀಡುವಂತೆ ಜೆಎನ್ ಯು ವಿದ್ಯಾರ್ಥಿಗಳು ಸಲ್ಲಿಸಿದ ಮನವಿಯನ್ನು ಬುಧವಾರ ಆಲಿಸುವುದಾಗಿ ಹೈಕೋರ್ಟ್ ಹೇಳಿದೆ.
ಇದಕ್ಕೆ ಮುನ್ನ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರ ಜಾಮೀನಿಗೆ ದೆಹಲಿ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.