ಕನ್ಹಯ್ಯ ದೇಶದ್ರೋಹಿ ಎಂದು ಹೇಳಲು ಸಾಕಷ್ಟು ಸಾಕ್ಷ್ಯಾಧಾರಗಳಿವೆ: ತನಿಖೆ ಸಂಸ್ಥೆ
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್ ಯು) ಪ್ರಕರಣ ಸಂಬಂಧ ಪೊಲೀಸ್ ಬಂಧನದಲ್ಲಿರುವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ವಿರುದ್ಧ ದೇಶದ್ರೋಹಿ ಪ್ರಕರಣ ಹೂಡಲು ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ಹೇಳಲು ತನಿಖಾ ಸಂಸ್ಥೆ ಹೇಳಿದೆ ಎಂದು ಮೂಲಗಳಿಂದ ತಿಳಿದುಬಂದಿದೆ...

Published On :
ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್ ಯು) ಪ್ರಕರಣ ಸಂಬಂಧ ಪೊಲೀಸ್ ಬಂಧನದಲ್ಲಿರುವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ವಿರುದ್ಧ ದೇಶದ್ರೋಹಿ ಪ್ರಕರಣ ಹೂಡಲು ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ಹೇಳಲು ತನಿಖಾ ಸಂಸ್ಥೆ ಹೇಳಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ವಿಶ್ವವಿದ್ಯಾಲಯದ ಆವರಣದಲ್ಲಿ ಕನ್ಹಯ್ಯ ಕುಮಾರ್ ಅವರು ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದ ಎಂದು ಬೆರಳು ಮಾಡಿ ತೋರಿಸಲು ಆತನ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳು ಲಭ್ಯವಿದೆ ಎಂದು ಹೇಳಿರುವ ತನಿಖೆ ಸಂಸ್ಥೆಯು ಪ್ರಕರಣ ಸಂಬಂಧ ವಿಶ್ವವಿದ್ಯಾಲಯದ ಉಪಕುಲಪತಿಗಳು ತನಿಖಾ ತಂಡವೊಂದನ್ನು ನೇಮಿಸಿದ್ದರು. ಸಮಿತಿಯ ವರದಿಯ ಪ್ರಕಾರ ಮೇಲ್ನೋಟದಲ್ಲಿ ಕನ್ಹಯ್ಯ ಕುಮಾರ್ ಮತ್ತು ಇನ್ನಿತರೆ 7 ವಿದ್ಯಾರ್ಥಿಗಳು ಅಸಂವಿಧಾನಿಕ ಘೋಷಣೆಗಳನ್ನು ಕೂಗಿದ್ದರು ಎಂದು ತಿಳಿದುಬಂದಿತ್ತು ಎಂದು ಹೇಳಿಕೊಂಡಿದೆ.
ತನಿಖಾ ಸಂಸ್ಥೆಯ ವರದಿ ಪ್ರಕಾರ, ಕಾಲೇಜು ಆವರಣದಲ್ಲಿ ಕಾರ್ಯಕ್ರಮ ಏರ್ಪಡಿಸುವುದಕ್ಕೂ ಮುನ್ನು ರಾಜಕೀಯ ಸಭೆಯೊಂದು ನಡೆದಿದ್ದು, ಕಾಲೇಜು ಅಧಿಕಾರಿಗಳು ಕಾರ್ಯಕ್ರಮಕ್ಕೆ ಅನುಮತಿ ನೀಡಿಲ್ಲದಿದ್ದರೂ, ವಿರೋಧದ ಮಧ್ಯೆಯೂ ಬಲವಂತವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನಂತರ ದೇಶ ವಿರೋಧಿ ಘೋಷಣೆಗಳನ್ನು ಕೂಗಲಾಗಿದೆ ಎಂದು ಹೇಳಲಾಗಿದೆ.
ಇದರಂತೆ ಪ್ರಕರಣ ಸಂಬಂಧ ದೆಹಲಿ ತನಿಖಾ ತಂಡ ತನಿಖೆ ನಡೆಸಿದ್ದು, ತನಿಖೆ ವೇಳೆ ಆಂತರಿಕ ವರದಿಯ ಪ್ರಕಾರ, ಕಾರ್ಯಕ್ರಮ ನಡೆಯುತ್ತಿರುವ ಸಂದರ್ಭದಲ್ಲಿ ಕನ್ಹಯ್ಯ ಕುಮಾರ್ ಸಬರ್ಮತಿ ಹಾಸ್ಟೆಲ್ ಮತ್ತು ಗಂಗಾ ದಾಭಾದಲ್ಲಿಯೇ ಇದ್ದ ಎಂದು ಹೇಳಲಾಗುತ್ತಿದ್ದು, ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದ. ಅಲ್ಲದೆ, ಕಾಲೇಜಿನ ಭದ್ರತಾ ಸಿಬ್ಬಂದಿಗಳಿಗೆ ಮುಂಗೆ ನಿಂತಿರುವ ವಿದ್ಯಾರ್ಥಿಗಳನ್ನು ತೆರವು ಗೊಳಿಸಿ ಪ್ರತಿಭಟನೆ ಕಾಲ್ನಡಿಗೆಯಲ್ಲಿ ಸಾಗುವಂತೆ ಮಾಡುವಂತೆ ಸೂಚಿಸಿದ್ದ ಎಂದು ಪ್ರತ್ಯಕ್ಷದರ್ಶಿಯೊಬ್ಬ ಮಾಹಿತಿ ನೀಡಿದ್ದಾನೆಂದು ಹೇಳಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪ್ರತಿಭಟನೆprotestSeditionJNUಜೆಎನ್ ಯುದೇಶದ್ರೋಹಿKanhaiya Kumarಕನ್ಹಯ್ಯ ಕುಮಾರ್Investigation Agencyತನಿಖೆ ಸಂಸ್ಥೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


