ಮೀಸಲಾತಿ ಜನ್ಮಸಿದ್ಧ ಹಕ್ಕಾಗಬಾರದು: ಮೋಹನ್ ಭಾಗವತ್
ಮೀಸಲಾತಿ ಬಗ್ಗೆ ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಮತ್ತೊಮ್ಮೆ ಮಾತನಾಡಿದ್ದು, ಮೀಸಲಾತಿ ಯಾರ ಜನ್ಮ ಸಿದ್ಧ ಹಕ್ಕು ಆಗಬಾರದು ಎಂದು ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ.

ಕೋಲ್ಕತಾ: ಮೀಸಲಾತಿ ಬಗ್ಗೆ ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಮತ್ತೊಮ್ಮೆ ಮಾತನಾಡಿದ್ದು, ಮೀಸಲಾತಿ ಯಾರ ಜನ್ಮ ಸಿದ್ಧ ಹಕ್ಕು ಆಗಬಾರದು, ಅಗತ್ಯವಿರುವವರಿಗೆ ಮಾತ್ರ ಮೀಸಲಾತಿ ನೀಡಬೇಕು ಮೀಸಲಿಗೆ ಅರ್ಹತೆಯನ್ನು ನಿರ್ಧರಿಸಲು ರಾಜಕೀಯೇತರ ಸಮಿತಿಯೊಂದನ್ನು ರಚಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ಕಳೆದ ಸೆಪ್ಟೆಂಬರ್ ನಲ್ಲಿ ಆರ್ ಎಸ್ ಎಸ್ ನ ಮುಖವಾಣಿ ಆರ್ಗನೈಸರ್ ಗೆ ಸಂದರ್ಶನ ನೀಡಿದ್ದ ಮೋಹನ್ ಭಾಗವತ್, ಮೀಸಲಾತಿ ಬಗ್ಗೆ ಹೇಳಿಕೆ ನೀಡಿದ್ದರು. ಈ ಬಗ್ಗೆ ನಂತರದ ದಿನಗಳಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಈಗ ಮತ್ತೊಮ್ಮೆ ಮೀಸಲಾತಿ ಕುರಿತ ಹೇಳಿಕೆ ನೀಡಿದ್ದು, ಎಲ್ಲರಿಗೂ ಸಮಾನವಾದ ಅವಕಾಶ ಸಿಗಬೇಕು ಹುಟ್ಟಿನಿಂದ ಮೀಸಲಾತಿ ಅರ್ಹತೆ ನಿರ್ಧಾರವಾಗಬಾರದು ಅಗತ್ಯತೆಯನ್ನು ಪರಿಗಣಿಸಿ ಮೀಸಲಾತಿ ನೀಡಬೇಕೆಂಬ ರೀತಿಯಲ್ಲಿ ಮೋಹನ್ ಭಾಗವತ್ ಹೇಳಿಕೆ ನೀಡಿದ್ದಾರೆ.
ಕೋಲ್ಕತಾದಲ್ಲಿ ಆಯೋಜಿಸಲಾಗಿದ್ದ ವಾಣಿಜ್ಯ ಮಂಡಳಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಭಾಗವತ್, ಇತ್ತೀಚಿನ ದಿನಗಳಲ್ಲಿ ಮೀಸಲಾತಿಗಾಗಿ ಹಲವರು ಬೇಡಿಕೆ ಇಡುತ್ತಿದ್ದಾರೆ. ಮೀಸಲು ಅರ್ಹತೆಯನ್ನು ನಿರ್ಧರಿಸಲು ರಾಜಕೀಯೇತರ ಸಮಿತಿ ರಚಿಸಬೇಕು, ಎಲ್ಲರಿಗೂ ಸಮಾನ ಅವಕಾಶ ನೀಡಬೇಕು ಎಂದು ಭಾಗವತ್ ಅಭಿಪ್ರಾಯಪಟ್ಟಿದ್ದಾರೆ.
ಡಾ.ಬಿ.ಆರ್ ಅಂಬೇಡ್ಕರ್ ಸಾಮಾಜಿಕ ತಾರತಮ್ಯ ಮುಕ್ತ, ಆರ್ಥಿಕ ಸ್ವಾತಂತ್ರ್ಯಕ್ಕೆ ಒತ್ತು ನೀಡಿದ್ದರು. ಸಾಮಾಜಿಕ ತಾರತಮ್ಯ ಇರುವವರೆಗೂ ಮೀಸಲಾತಿ ವಿಷಯ ಚರ್ಚೆಯಲ್ಲಿರುತ್ತದೆ, ಇಂದಿಗೂ ಸಾಮಾಜಿಕ ತಾರತಮ್ಯ ಸಮಸ್ಯೆ ಇದೆ ಎಂದು ಆರ್ ಎಸ್ ಎಸ್ ಮುಖಂಡ ಭಾಗವತ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


