ದೇಶ

ಕಾಂಡೋಮ್ ಹೇಳಿಕೆ; ಶಾಸಕ ಅಹುಜಾ ವಿರುದ್ಧ ಸಮನ್ಸ್ ಜಾರಿ?

ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಜ್ಞಾನ್ದೇವ್ ಅಹುಜಾ ವಿರುದ್ಧ ಇದೀಗ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಬುಧವಾರ ಸಮನ್ಸ್ ಜಾರಿ ಮಾಡಿರುವುದಾಗಿ ತಿಳಿದುಬಂದಿದೆ...

ಕಾಂಡೋಮ್ ಹೇಳಿಕೆ; ಶಾಸಕ ಅಹುಜಾ ವಿರುದ್ಧ ಸಮನ್ಸ್ ಜಾರಿ?
ಬಿಜೆಪಿ ಶಾಸಕ ಜ್ಞಾನ್ದೇವ್ ಅಹುಜಾ
Published On :

ನವದೆಹಲಿ; ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಜ್ಞಾನ್ದೇವ್ ಅಹುಜಾ ವಿರುದ್ಧ ಇದೀಗ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಬುಧವಾರ ಸಮನ್ಸ್ ಜಾರಿ ಮಾಡಿರುವುದಾಗಿ ತಿಳಿದುಬಂದಿದೆ

ನಿನ್ನೆಯಷ್ಟೇ ಜೆಎನ್ ಯು ವಿವಾದ ಕುರಿತಂತೆ ಹೇಳಿಕೆ ನೀಡಿದ್ದ ಅಹುಜಾ ಅವರು, ಜೆಎನ್ ಯು ವಿವಿಯಲ್ಲಿ ಪ್ರತಿದಿನ 2 ಸಾವಿರ ಮದ್ಯದ ಬಾಟಲಿಗಳು, 10 ಸಾವಿರ ಉಪಯೋಗಿಸಿದ ಸಿಗರೇಟ್, 4 ಸಾವಿರ ಬೀಡಿಗಳು, 50 ಸಾವಿರ ಮೂಳೆಗಳು, 2 ಸಾವಿರ ಚಿಪ್ಸ್ ಕವರ್ಗಳು, 3 ಸಾವಿರ ಬಳಕೆಯಾದ  ಕಾಂಡೋಮ್ ಗಳು ಹಾಗೂ 500 ಗರ್ಭನಿರೋಧಕ ಚುಚ್ಚು ಮದ್ದುಗಳು ಪತ್ತೆಯಾಗುತ್ತವೆ. ಅಲ್ಲದೆ, ರಾತ್ರಿ 8 ರ ನಂತರ ವಿವಿಯಲ್ಲಿ ಯುವತಿಯರು ಅರೆ ನಗ್ನ ನೃತ್ಯಗಳನ್ನು ಮಾಡುತ್ತಿರುತ್ತಾರೆ ಎಂದು ಹೇಳಿದ್ದರು.

ಬಿಜೆಪಿ ಶಾಸಕನ ಈ ಹೇಳಿಕೆ ಸಾಕಷ್ಟು ವಿರೋಧಗಳು ಹಾಗೂ ಟೀಕೆಗಳು ವ್ಯಕ್ತವಾಗಿದ್ದವು. ಇದೀಗ ಶಾಸಕ ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಅಹುಜಾ ವಿರುದ್ಧ ಸಮನ್ಸ್ ಜಾರಿ ಮಾಡಿದ್ದು, ದೆಹಲಿಗೆ ಬಂದು ಹೇಳಿಕೆ ಸಂಬಂಧ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.