ಹೆದರುತ್ತಿರುವ ಸರ್ಕಾರ ಸಂಸತ್ತಿನಲ್ಲಿ ಮಾತನಾಡಲು ಬಿಡುತ್ತಿಲ್ಲ: ರಾಹುಲ್ ಗಾಂಧಿ
ನನ್ನ ಬಗ್ಗೆ ಹೆದರುತ್ತಿರುವ ಸರ್ಕಾರ ನನಗೆ ಸಂಸತ್ತಿನಲ್ಲಿ ಮಾತನಾಡಲು ಬಿಡುತ್ತಿಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಬುಧವಾರ ಹೇಳಿದ್ದಾರೆ...

ನವದೆಹಲಿ: ನನ್ನ ಬಗ್ಗೆ ಹೆದರುತ್ತಿರುವ ಸರ್ಕಾರ ನನಗೆ ಸಂಸತ್ತಿನಲ್ಲಿ ಮಾತನಾಡಲು ಬಿಡುತ್ತಿಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಬುಧವಾರ ಹೇಳಿದ್ದಾರೆ.
ಸಂಸತ್ತಿನಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನ ಸಂಬಂಧ ಮಾತನಾಡಿರುವ ಅವರು, ಜೆಎನ್ ಯು ಪ್ರಕರಣ ಸಂಬಂಧ ಚರ್ಚೆ ನಡೆಸಲು ನಾವು ಸಿದ್ಧರಿದ್ದೇವೆ. ಆದರೆ, ಈ ಬಗ್ಗೆ ಸಂಸತ್ತಿನಲ್ಲಿ ಮಾತನಾಡಲು ನನಗೆ ಅವಕಾಶ ನೀಡಲಾಗುತ್ತಿಲ್ಲ. ನಾನೇನು ಮಾತನಾಡುತ್ತೇನೆಂಬುದರ ಬಗ್ಗೆ ಸರ್ಕಾರಕ್ಕೆ ಭಯವಿದೆ. ಹೀಗಾಗಿ ಅವರು ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಹೇಳಿದ್ದಾರೆ.
ಇಂದು ನಡೆದ ಅಧಿವೇಶನದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿ ರೋಹಿತ್ ವೆಮುಲಾ ಆತ್ಮಹತ್ಯೆ ಪ್ರಕರಣ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದೆ. ಕಲಾಪ ಆರಂಭವಾಗುತ್ತಿದ್ದಂತೆ ಬಿಎಸ್ ಪಿ ನಾಯಕಿ ಮಾಯಾವತಿಯವರು ರೋಹಿತ್ ಪ್ರಕರಣವನ್ನು ಪ್ರಸ್ತಾಪ ಮಾಡಿದ್ದರು. ವಿಷಯ ಪ್ರಸ್ತಾಪವಾದ ಕೆಲವು ನಿಮಿಷಗಳಲ್ಲೇ ಕಲಾಪ ಮುಂದೂಡುವಂತಾಗಿತ್ತು. ತದನಂತರ ಮತ್ತೆ ಕಲಾಪ ಆರಂಭವಾದಾಗಲೂ ಗದ್ದಲು ಮುಂದುವರೆದ ಕಾರಣ ಕಲಾಪವನ್ನು 2 ಗಂಟೆಗೆ ಮತ್ತೆ ಮುಂದೂಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


