ದೇಶ

ದೇಶ ವಿರೋಧಿ ಪ್ರತಿಭಟನೆ ಹತ್ತಿಕ್ಕಲು ಎಬಿವಿಪಿಯಿಂದ ರ್ಯಾಲಿ

ಜೆಎನ್ ಯು ವಿದ್ಯಾರ್ಥಿ ಕನ್ಹಯ್ಯ ಕುಮಾರ್ ಬಂಧನ ಹಾಗೂ ಹೈದರಾಬಾದ್ ವಿಶ್ವವಿದ್ಯಾಲಯದ ಪಿಹೆಚ್ ಡಿ ವಿದ್ಯಾರ್ಥಿ ರೋಹಿತ್ ವೇಮುಲ ಸಾವು ಖಂಡಿಸಿ...

ದೇಶ ವಿರೋಧಿ ಪ್ರತಿಭಟನೆ ಹತ್ತಿಕ್ಕಲು ಎಬಿವಿಪಿಯಿಂದ ರ್ಯಾಲಿ
ಎಬಿವಿಪಿ ವತಿಯಿಂದ ನಿನ್ನೆ ದೆಹಲಿಯಲ್ಲಿ ನಡೆದ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತರು.
Published On :

ನವದೆಹಲಿ: ಜೆಎನ್ ಯು ವಿದ್ಯಾರ್ಥಿ ಕನ್ಹಯ್ಯ ಕುಮಾರ್ ಬಂಧನ ಹಾಗೂ ಹೈದರಾಬಾದ್ ವಿಶ್ವವಿದ್ಯಾಲಯದ ಪಿಹೆಚ್ ಡಿ ವಿದ್ಯಾರ್ಥಿ ರೋಹಿತ್ ವೇಮುಲ ಸಾವು ಖಂಡಿಸಿ ದೇಶಾದ್ಯಂತ ನಡೆಸುತ್ತಿರುವ ಪ್ರತಿಭಟನೆಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿರುವುದರಿಂದ ಅದನ್ನು ಹಿಮ್ಮೆಟ್ಟಿಸಲು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ರ್ಯಾಲಿಗೆ ಮುಂದಾಗಿದೆ.
ದೆಹಲಿಯ ರಾಮಲೀಲಾ ಮೈದಾನದಿಂದ ಜಂತರ್ ಮಂತರ್ ಗೆ ರ್ಯಾಲಿ ಹೊರಟ ಎಬಿವಿಪಿ ಕಾರ್ಯಕರ್ತರು, ''ಮಾರ್ಕ್ಸ್ ವಾದ ಅಲ್ಲ, ಮಾವೋವಾದಿ ಅಲ್ಲ,ಎಲ್ಲಕ್ಕಿಂತ ಮೇಲೆ ರಾಷ್ಟ್ರವಾದ'' ಎಂದು ಘೋಷಣೆ ಕೂಗುತ್ತಾ ನಿನ್ನೆ ಸಾಗಿದರು.

 ಅನೇಕ ಕಾಲೇಜುಗಳ ವಿದ್ಯಾರ್ಥಿಗಳು ರಸ್ತೆಗಿಳಿದು ಜೆಎನ್ ಯು ವಿದ್ಯಾರ್ಥಿಗಳು ದೇಶ ವಿರೋಧಿಗಳೆಂದು ಕೂಗಿದರು. 150 ಅಡಿ ಎತ್ತರದ ತ್ರಿವರ್ಣ ಧ್ವಜವನ್ನು ಹಾರಿಸುತ್ತಾ ರ್ಯಾಲಿಯಲ್ಲಿ ಸಾಗಿದರು.

ಜೆಎನ್ ಯುನಲ್ಲಿ ವಿದ್ಯಾರ್ಥಿಗಳು ಫೆಬ್ರವರಿ 9ರಂದು ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದರು ಎಂಬ ವಿಷಯಕ್ಕೆ ಸಂಬಂಧಪಟ್ಟಂತೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದವರಿಗೆ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.