ಜೆಎನ್ ಯು ವಿದ್ಯಾರ್ಥಿಗಳನ್ನು ಬೆಂಬಲಿಸಿ ಅಲಹಾಬಾದ್ ನಲ್ಲಿ ಪ್ರತಿಭಟನೆ: ವಕೀಲರಿಂದ ಥಳಿತ
ಕನ್ಹಯ್ಯ ಕುಮಾರ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಎಡಪಕ್ಷದ ಸಂಘಟನೆಗಳ ಕಾರ್ಯಕರ್ತರನ್ನು ಅಲಹಾಬಾದ್ ವಕೀಲರು ಥಳಿಸಿದ್ದಾರೆ.

ಅಲಹಾಬಾದ್: ಜೆಎನ್ ಯು ವಿದ್ಯಾರ್ಥಿ ಸಂಘಟನೆ ಮುಖಂಡ ಕನ್ಹಯ್ಯ ಕುಮಾರ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಎಡಪಕ್ಷದ ಸಂಘಟನೆಗಳ ಕಾರ್ಯಕರ್ತರನ್ನು ಅಲಹಾಬಾದ್ ವಕೀಲರು ಥಳಿಸಿದ್ದಾರೆ.
ದೇಶದ್ರೋಹದ ಪ್ರಕರಣ ದಾಖಲಿಸಿರುವುದನ್ನು ವಿರೋಧಿಸಿ ಕಾರ್ಮಿಕ ಸಂಘಟನೆ ಕಾರ್ಯಕರ್ತರು ಹಾಗೂ ಸಿಪಿಐ(ಎಂ) ನ ಕಾರ್ಯಕರ್ತರು ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆ ಅಹಲಾಬಾದ್ ನ ಜಿಲ್ಲಾ ನ್ಯಾಯಾಲಯದ ಎದುರು ಹಾದುಹೋಗುವ ವೇಳೆ ವಕೀಲರು ಪ್ರತಿಭಟನಾ ನಿರತರನ್ನು ಥಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ಸಮೀರ್ ಸಿಂಗ್ ಹೇಳಿದ್ದಾರೆ.
ಥಳಿತಕ್ಕೊಳಗಾದ ಪ್ರತಿಭಟನಾ ನಿರತರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ವಕೀಲರ ವಿರುದ್ಧ ಪ್ರಕರಣ ದಾಖಲಾಗಿದೆ. ಜಿಲ್ಲಾಡಳಿತದಿಂದ ಅನುಮತಿ ಪಡೆಯದೇ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದ ಪರಿಣಾಮ ಎಡಪಕ್ಷಗಳ ಕಾರ್ಯಕರ್ತರ ವಿರುದ್ಧವೂ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಸಿಪಿಐ ಎಂಎಲ್ ಈ ಬಗ್ಗೆ ಹೇಳಿಕೆ ನೀಡಿದ್ದು, ಆರ್ ಎಸ್ ಎಸ್ ನವರು ಕರಿ ಕೋಟು ಧರಿಸಿ ಪ್ರತಿಭಟನಾ ನಿರತರನ್ನು ಥಳಿಸಿದ್ದಾರೆ ಎಂದು ಆರೋಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


