ಶಾಸಕನೊಂದಿಗೆ ಸೆಕ್ಸ್ ಮಾಡುವಂತೆ ಬಾಲಕಿಗೆ ಒತ್ತಾಯ; ಮಹಿಳೆ ಬಂಧನ
ಆರ್ ಜೆಡಿ ಶಾಸಕನ ಜೊತೆ ಸೆಕ್ಸ್ ಮಾಡುವಂತೆ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಪೀಡಿಸುತ್ತಿದ್ದ ಮಹಿಳೆಯೊಬ್ಬಳನ್ನು ನಳಂದ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ...

ಬಿಹಾರ ಶರೀಫ್: ಆರ್ ಜೆಡಿ ಶಾಸಕನ ಜೊತೆ ಸೆಕ್ಸ್ ಮಾಡುವಂತೆ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಪೀಡಿಸುತ್ತಿದ್ದ ಮಹಿಳೆಯೊಬ್ಬಳನ್ನು ನಳಂದ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.
ಸುಲೇಖ ದೇವಿ ಬಂಧನಕ್ಕೊಳಗಾದ ಮಹಿಳೆ. ಮಹಿಳೆಯೊಬ್ಬಳು ಬಾಲಕಿಗೆ ಶಾಸಕನೊಂದಿಗೆ ಸೆಕ್ಸ್ ನಲ್ಲಿ ಭಾಗಿಯಾಗುವಂತೆ ಪೀಡಿಸುತ್ತಿರುವುದಾಗಿ ಮಾಹಿತಿ ತಿಳಿದುಬಂದಿತ್ತು. ನಂತರ ಪ್ರಕರಣ ಸಂಬಂಧ ಮಹಿಳೆಯನ್ನು ಖಡ್ಡಿ ಹಳ್ಳಿಯ ಹಿಲ್ಸಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಕೆಯನ್ನು ಬಂಧನಕ್ಕೊಳಪಡಿಸಲಾಯಿತು.
ಪ್ರಕರಣ ಸಂಬಂಧ ಮಹಿಳೆ ಸಹಾಯ ಮಾಡಿದ ಬಾಲಕಿಯ ತಾಯಿ ರಾಧಾ ದೇವಿ, ಮಗಳು ಚೋಟಿ ಕುಮಾರಿ, ಈಕೆ ತಂಗಿ ತುಳಸಿ ದೇವಿ, ಹಾಗೂ ಮೋಟಿ ರಾಮ್ ಅವರನ್ನು ಕೂಡ ಬಂಧನಕ್ಕೊಪಡಲಿಸಲಾಗಿದ್ದು, ನವಡಾ ಶಾಸಕ ರಾಜ್ ಬಲ್ಲಭ್ ಯಾದವ್ ಅವರನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


