ದೇಶ

ಪಶ್ಚಿಮ ಬಂಗಾಳದಲ್ಲಿ ವಿದ್ಯಾರ್ಥಿಗಳ ನಡುವೆ ಘರ್ಷಣೆ

ಪಶ್ಚಿಮ ಬಂಗಾಳದ ಬುರ್ದ್ವಾನ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿರುವುದಾಗಿ ಶನಿವಾರ ತಿಳಿದುಬಂದಿದೆ...

ಪಶ್ಚಿಮ ಬಂಗಾಳದಲ್ಲಿ ವಿದ್ಯಾರ್ಥಿಗಳ ನಡುವೆ ಘರ್ಷಣೆ
ಪಶ್ಚಿಮ ಬಂಗಾಳದಲ್ಲಿ ವಿದ್ಯಾರ್ಥಿಗಳ ನಡುವೆ ಘರ್ಷಣೆ
Published On :

ಬುರ್ದ್ವಾನ್: ಪಶ್ಚಿಮ ಬಂಗಾಳದ ಬುರ್ದ್ವಾನ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿರುವುದಾಗಿ ಶನಿವಾರ ತಿಳಿದುಬಂದಿದೆ.

ನಿನ್ನೆ ರಾತ್ರಿ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಮೂಲಗಳ ಪ್ರಕಾರ ವಿದ್ಯಾರ್ಥಿಗಳು ಮೂರನೇ ವರ್ಷದ ಪರೀಕ್ಷೆಯನ್ನು ಮುಂದೆ ಹಾಕುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಹೊರಗಿನಿಂದ ಬಂದ ಕೆಲವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದರು ಎಂಬ ಆರೋಪಗಳು ಕೇಳಿಬಂದಿದೆ.

ಘಟನೆ ಕುರಿತಂತೆ ಮಾತನಾಡಿರುವ ವಿದ್ಯಾರ್ಥಿಗಳು, ನಮ್ಮ ಗೆಳೆಯರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ನಾವು ಟಿಎಂಸಿಗೆ ಸೇರಿದವರಾಗಿದ್ದು, ನಮ್ಮ ಸ್ಥಳಕ್ಕೆ ಬರುವಂತೆ ಹೇಳಲಾಗಿತ್ತು. ನಂತರ ಇದಕ್ಕಿಂತೆ ಬಂದ ಕೆಲವರು ಹುಡುಗಿಯರು ಎಂದು ನೋಡದೆಯೇ ಹೊಡೆದರು ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.