ದೇಶ

ಮನ್ ಕೀ ಬಾತ್‌ನಲ್ಲಿ ಜೆಎನ್‌ಯು ಬಗ್ಗೆ ಮೋದಿ ಮೌನ ಯಾಕೆ?

ಪ್ರಸ್ತುತ ಕಾರ್ಯಕ್ರಮದಲ್ಲಿ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಮಾಜಿ ಚೆಸ್ ಚಾಂಪಿಯನ್ ವಿಶ್ವನಾಥನ್ ಆನಂದ್, ವಿಜ್ಞಾನಿ ಸಿಎನ್ ಆರ್ ರಾವ್ ಅವರಿಂದಲೂ...

ಮನ್ ಕೀ ಬಾತ್‌ನಲ್ಲಿ ಜೆಎನ್‌ಯು ಬಗ್ಗೆ ಮೋದಿ ಮೌನ ಯಾಕೆ?
ನರೇಂದ್ರ ಮೋದಿ
Published On :
ನವದೆಹಲಿ: ಭಾನುವಾರ ಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್ ಕೀ ಬಾತ್ ನಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆಯನ್ನು ಹೇಗೆ ಎದುರಿಸಬೇಕು ಎಂದು ಹೇಳಿದ್ದರು. ಪ್ರಸ್ತುತ ಕಾರ್ಯಕ್ರಮದಲ್ಲಿ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಮಾಜಿ ಚೆಸ್ ಚಾಂಪಿಯನ್ ವಿಶ್ವನಾಥನ್ ಆನಂದ್, ವಿಜ್ಞಾನಿ ಸಿಎನ್ ಆರ್ ರಾವ್ ಅವರಿಂದಲೂ ಮಾತುಗಳನ್ನಾಡಿಸಿದ್ದು ವಿಶೇಷವಾಗಿತ್ತು. ವಿದ್ಯಾರ್ಥಿಗಳ ಬಗ್ಗೆ ಅಷ್ಟೆಲ್ಲಾ ಕಾಳಜಿ ತೋರಿಸಿದ್ದ ಮೋದಿಯವರು  ಹೈದ್ರಾಬಾದ್ ವಿಶ್ವವಿದ್ಯಾನಿಲಯ ಮತ್ತು ಜೆಎನ್‌ಯುವಿನಲ್ಲಿ ನಡೆದ ಘಟನೆಗಳ ಬಗ್ಗೆ ಮೌನ ವಹಿಸಿರುವುದು ಯಾಕೆ ಎಂದು ವಿಪಕ್ಷಗಳು ಪ್ರಶ್ನಿಸಿವೆ. 
ಪರೀಕ್ಷೆ ಭಯವನ್ನು ಹೋಗಲಾಡಿಸುವುದು ಹೇಗೆ ಮತ್ತು ಯಾವ ರೀತಿ ಪಾಸಿಟಿವ್ ನಿಲುವು ಸ್ವೀಕರಿಸಬೇಕೆಂದು ವಿದ್ಯಾರ್ಥಿಗಳಲ್ಲಿ ಹೇಳಿದ ಮೋದಿ, ಮಕ್ಕಳ ಮೇಲೆ ಯಾವುದೇ ಒತ್ತಡವನ್ನು ಹೇರಬೇಡಿ ಎಂದು ಹೆತ್ತವರಲ್ಲಿ ವಿನಂತಿಸಿದ್ದರು. ಆದರೆ ಹೈದ್ರಾಬಾದ್ ವಿವಿ ಮತ್ತು  ಜವಾಹರ್‌ಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ನಡೆದ ಘಟನೆಗಳ ಬಗ್ಗೆ ಪ್ರಧಾನಿ ಮೌನ ವಹಿಸಿರುವುದು ಯಾಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಆದಾಗ್ಯೂ, ಮುರಾರಿ ಬಾಪು ಅವರು ಈ ಶೋನಲ್ಲಿ ಮಾತನಾಡಿರುವುದನ್ನೂ ಕಾಂಗ್ರೆಸ್ ಖಂಡಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.