ಉನ್ನತ ಶಿಕ್ಷಣಕ್ಕೆ ಹಣಕಾಸು ನೆರವು ಒದಗಿಸಲು ಹಣಕಾಸು ಸಂಸ್ಥೆಗಳ ಸ್ಥಾಪನೆ
ಕೇಂದ್ರ ಸರ್ಕಾರ ಈ ಬಾರಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಅನೇಕ ಕ್ರಮಗಳನ್ನು ಕೈಗೊಂಡಿದೆ...

ನವದೆಹಲಿ: ಕೇಂದ್ರ ಸರ್ಕಾರ ಈ ಬಾರಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಅನೇಕ ಕ್ರಮಗಳನ್ನು ಕೈಗೊಂಡಿದೆ. ಅದಕ್ಕಾಗಿ ಬಜೆಟ್‌ನಲ್ಲಿ ಹಲವಾರು ಯೋಜನೆಗಳನ್ನು ಪ್ರಕಟಿಸಿದೆ.
ಐಐಟಿಯಂಥ ಉನ್ನತ ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸರ್ಕಾರವು ಸಾವಿರ ಕೋಟಿ ರೂಪಾಯಿ ಮೂಲ ಬಂಡವಾಳದೊಂದಿಗೆ ಉನ್ನತ ಶಿಕ್ಷಣ ಸಾಲ ವಿತರಣಾ ಸಂಸ್ಥೆ (ಎಚ್‌ಇಎಫ್ಎ) ರಚನೆಗೆ ಸರ್ಕಾರ ನಿರ್ಣಯಿಸಿದೆ.
ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ 62 ನವೋದಯ ವಿದ್ಯಾಲಯಗಳನ್ನು ಹೊಸದಾಗಿ ಸ್ಥಾಪಿಸಲಾಗುತ್ತಿದೆ. ಯಾವೆಲ್ಲಾ ಜಿಲ್ಲೆಗಳಲ್ಲಿ ನವೋದಯ ವಿದ್ಯಾಲಯಗಳಿಲ್ಲವೋ ಅಲ್ಲೆಲ್ಲ ಇನ್ನೆರಡು ವರ್ಷಗಳಲ್ಲಿ ಸ್ಥಾಪಿಸಲಾಗುತ್ತದೆ.
ಸರ್ವಶಿಕ್ಷಣ ಅಭಿಯಾನಕ್ಕೆ ಹಂಚಿಕೆಯಾಗುವ ಮೊತ್ತವನ್ನೂ ಹೆಚ್ಚಿಸುವುದಾಗಿ ಬಜೆಟ್‌ನಲ್ಲಿ ವಿತ್ತ ಸಚಿವರು ಘೋಷಣೆ ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ತಮ್ಮ ಅಂಕಪಟ್ಟಿ, ಡಿಗ್ರಿ ಸರ್ಟಿಫಿಕೇಟು, ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಸುರಕ್ಷಿತವಾಗಿ ಸಂಗ್ರಹಿಸಿಡಲು 'ಡಿಜಿಟಲ್ ಡಿಪಾಸಿಟರಿ' ಸ್ಥಾಪಿಸುವುದಾಗಿ ಅರುಣ್ ಜೇಟ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


