ಪಠಾಣ್ ಕೋಟ್ ದಾಳಿ ನಂತರ ಭದ್ರತೆ ಹೆಚ್ಚಾಗಿದೆ: ಭಾರತೀಯ ವಾಯುಪಡೆ
ಪಠಾಣ್ ಕೋಟ್ ವಾಯುನೆಲೆ ಮೇಲಿನ ಉಗ್ರರ ದಾಳಿ ನಂತರ ಎಲ್ಲೆಡೆ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಭದ್ರತೆಯನ್ನು ಮತ್ತಷ್ಟು ಹೆಚ್ಚಿಸುವ ಅಗತ್ಯವಿದೆ ಎಂದು ಭಾರತೀಯ ವಾಯುಪಡೆ ಮುಖ್ಯಸ್ಥ ಸಿ. ಹರಿಕುಮಾರ್ ಅವರು ಹೇಳಿದ್ದಾರೆ...

ಶಿಲ್ಲಾಂಗ್: ಪಠಾಣ್ ಕೋಟ್ ವಾಯುನೆಲೆ ಮೇಲಿನ ಉಗ್ರರ ದಾಳಿ ನಂತರ ಎಲ್ಲೆಡೆ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಭದ್ರತೆಯನ್ನು ಮತ್ತಷ್ಟು ಹೆಚ್ಚಿಸುವ ಅಗತ್ಯವಿದೆ ಎಂದು ಭಾರತೀಯ ವಾಯುಪಡೆ ಮುಖ್ಯಸ್ಥ ಸಿ. ಹರಿಕುಮಾರ್ ಅವರು ಹೇಳಿದ್ದಾರೆ.
ಈ ಕುರಿತಂತೆ ಎರಡು ದಿನಗಳ ಕಾಲ ನಡೆಯಲಿರುವ ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ ವಿಚಾರ ಸಂಕಿರಣದಲ್ಲಿ ಮಾತನಾಡಿರುವ ಅವರು, ನಮ್ಮ ದೇಶ ಭದ್ರತೆಯನ್ನು ಹೆಚ್ಚುವತ್ತ ಸಾಕಷ್ಟು ಪ್ರಯತ್ನಗಳನ್ನು ಪಡೆಯುತ್ತಿದೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ನಮ್ಮಲ್ಲಿ ಕೆಲವು ವೈರತ್ವ ಹೊಂದಿರುವ ಏಜೆಂಟ್ ಗಳಿದ್ದು ಅವರು ಸಮಸ್ಯೆ ಬಗೆಹರಿಯಲು ಬಿಡುತ್ತಿಲ್ಲ. ದೇಶಕ್ಕೆ ಇಂದು ಅಗತ್ಯಕ್ಕಿಂತ ಹೆಚ್ಚು ಭದ್ರತೆಯ ಅವಶ್ಯಕತೆಯಿಂದೆ ಎಂದು ಹೇಳಿದ್ದಾರೆ.
ನಾವು ಈಗಾಗಲೇ ಎಸ್ಒಪಿ ಗಳನ್ನ ಮಾಡಿದ್ದು, ಈ ಬಗ್ಗೆ ಸಾಕಷ್ಟು ತಲೆ ಕೆಡಿಸಿಕೊಂಡು ನಿರ್ಧಾರಗಳು ಕೈಗೊಂಡಿದ್ದೇವೆ. ಅಲ್ಲದೆ, ಭದ್ರತೆ ಕ್ಷೇತ್ರದಲ್ಲಿ ಪ್ರತಿಯೊಬ್ಬರನ್ನು ಯಾವ ರೀತಿಯಲ್ಲಿ ತೊಡಗಿಕೊಳ್ಳುವಂತೆ ಮಾಡುವುದು ಎಂಬುದರ ಬಗ್ಗೆ ಚಿಂತನೆ ನಡೆಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


