ವಡಾ ಪಾವ್ ಫ್ರೀಯಾಗಿ ನೀಡದ್ದಕ್ಕೆ ಸಹಾಯಕನಿಗೆ ಥಳಿಸಿದ ಶಿವಸೇನೆ ನಾಯಕ
ವಡಾಪಾವ್'ನ್ನು ಫ್ರೀಯಾಗಿ ನೀಡಿಲಿಲ್ಲ ಎಂಬ ಕಾರಣಕ್ಕೆ ಅಂಗಡಿ ಮಾಲೀಕನ ಸಹಾಯಕನೊಬ್ಬನಿಗೆ ಶಿವಸೇನೆ ನಾಯಕ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ವಿಲೆಪಾರ್ಲೆಯಲ್ಲಿ ಶನಿವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ...

ಮುಂಬೈ: ವಡಾಪಾವ್'ನ್ನು ಫ್ರೀಯಾಗಿ ನೀಡಿಲಿಲ್ಲ ಎಂಬ ಕಾರಣಕ್ಕೆ ಅಂಗಡಿ ಮಾಲೀಕನ ಸಹಾಯಕನೊಬ್ಬನಿಗೆ ಶಿವಸೇನೆ ನಾಯಕ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ವಿಲೆಪಾರ್ಲೆಯಲ್ಲಿ ಶನಿವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಸುನೀಲ್ ಮಹಾದಿಕ್ ಸೇನಾ ನಾಯಕ ವ್ಯಕ್ತಿಗೆ ಥಳಿಸಿದವನಾಗಿದ್ದಾನೆ. ಶನಿವಾರ ಸಂಜೆ ಅಂಗಡಿಗೆ ಬಂದಿರುವ ಸುನೀಲ್ 100 ವಡಾಪಾವನ್ನು ಉಚಿತವಾಗಿ ನೀಡುವಂತೆ ಕೇಳಿದ್ದಾನೆ. ಈ ವೇಳೆ ಅಂಗಡಿ ಮಾಲೀಕನ ಸಹಾಯಕನಾಗಿ ಕೆಲಸ ಮಾಡುತ್ತಿರುವ ಚೇತನ್ ಜೆವೇರಿಯಾ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾನೆ.
ಇದರಿಂದ ತೀವ್ರವಾಗಿ ಕೆಂಡಾಮಂಡಲವಾಗಿರುವ ಸುನೀಲ್ ಚೇತನ್ ನ್ನನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಹಲ್ಲೆ ನಂತರ ಚೇತನ್ ಮುಂಬೈ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಇದೀಗ ಕ್ರಮಕೈಗೊಂಡಿರುವ ಪೊಲೀಸರು ಸುನೀಲ್ ನನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


