ದೇಶ

2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿ ಸ್ಪರ್ಧೆ

ಉತ್ತರ ಪ್ರದೇಶದ ವಿಧಾನಸಭೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ 2017ರ ವಿಧಾನಸಭೆ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸಲಿದೆ ಎಂದು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ...

2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿ ಸ್ಪರ್ಧೆ
ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ (ಸಂಗ್ರಹ ಚಿತ್ರ)
Published On :

ಲಖನೌ: ಉತ್ತರ ಪ್ರದೇಶದ ವಿಧಾನಸಭೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ 2017ರ ವಿಧಾನಸಭೆ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸಲಿದೆ ಎಂದು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ರಾಯ್ ಬರೇಲಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಸಚಿವ ಮುಖ್ತಾರ್ ಅಬ್ಬಸ್ ನಖ್ವಿ ಅವರು, ಮುಂಬರುವ 2017ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಗಳನ್ನು ತಳ್ಳಿ ಹಾಕಿದರು. ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ನಖ್ವಿ ಹೇಳಿದರು.

ಜೇಟ್ಲಿ ಶುದ್ಧ ಹಸ್ತರು ಮತ್ತು ಪ್ರಾಮಾಣಿಕರು
ಇದೇ ವೇಳೆ ಡಿಡಿಸಿಎ ಭ್ರಷ್ಟಾಚಾರ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ನಖ್ವಿ ಅವರು, ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ನಿಜಕ್ಕೂ ಶುದ್ಧ ಹಸ್ತರು ಮತ್ತು ಪ್ರಾಮಾಣಿಕ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದರು. ಅಲ್ಲದೆ ಆಮ್ ಆದ್ಮಿ ಪಕ್ಷದ ಆರೋಪಗಳನ್ನು ತಳ್ಳಿಹಾಕಿದ ಅವರು, ಆಪ್ ಸುಳ್ಳನ್ನೇ ಪದೇ ಪದೇ ಹೇಳುವ ಮೂಲಕ ಅದನ್ನು ಸತ್ಯ ಮಾಡುವ ಹಗಲುಗನಸು ಕಾಣುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್ ಭ್ರಷ್ಟಾಚಾರದ ಮಾತೃಭೂಮಿ
ಸಂಸತ್ ಕಲಾಪಕ್ಕೆ ಅಡ್ಡಿ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ಸದಸ್ಯರ ಕುರಿತಂತೆ ಕಿಡಿಕಾರಿದ ನಖ್ವಿ, ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಮಾರಕವಾಗಿದೆ. ಕಾಂಗ್ರೆಸ್ ನ ಊಳಿಗಮಾನ್ಯ ಮತ್ತು ಚಕ್ರಾಧಿಪತ್ಯದ ಮನಸ್ಥಿತಿ ಎಂದೂ ದೇಶದ ಅಭಿವೃದ್ಧಿ ಸಹಿಸುವುದಿಲ್ಲ. ಕಾಂಗ್ರೆಸ್  ಭ್ರಷ್ಟಾಚಾರದ ಮಾತೃಭೂಮಿ ಇದ್ದಂತೆ ಎಂದು ಹೇಳಿದರು. ಅಲ್ಲದೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿದೇಶ ಪ್ರಯಾಣ ಕುರಿತಂತೆ ಮಾತನಾಡಿದ ಅವರು, ಹೊಸ ವರ್ಷವನ್ನು ಯಾರು ವಿಶ್ವದ ಯಾವುದೇ ಮೂಲೆಯಲ್ಲಿ ಬೇಕಾದರೂ ಆಚರಿಸಬಹುದು. ಈ ವಿದೇಶ ಯಾತ್ರೆಯಿಂದಾದರೂ ರಾಹುಲ್ ಗಾಂಧಿ ಅವರು ಒಳ್ಳೆಯ ರೀತಿಯಿಂದ ಯೋಚಿಸುವಂತಾಗಲಿ ಎಂದು ವ್ಯಂಗ್ಯವಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.