ಪಠಾಣ್ ಕೋಟ್ ಉಗ್ರ ದಾಳಿ; ಮಾಜಿ ಐಎಎಫ್ ಅಧಿಕಾರಿಯ ವಿಚಾರಣೆ
ಪಠಾಣ್‌ಕೋಟ್ ಉಗ್ರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಮೂಲದ ಐಎಸ್‌ಐಗೆ ಗೂಢಚರ್ಯೆ ಮಾಡಲು ಸಹಾಯ ಮಾಡಿದ ಆರೋಪದಲ್ಲಿ...

Published On :
ನವದೆಹಲಿ: ಪಠಾಣ್‌ಕೋಟ್ ಉಗ್ರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಮೂಲದ ಐಎಸ್‌ಐಗೆ ಗೂಢಚರ್ಯೆ ಮಾಡಲು ಸಹಾಯ ಮಾಡಿದ ಆರೋಪದಲ್ಲಿ ಬಂಧಿತನಾಗಿರುವ ಭಾರತೀಯ ವಾಯುಸೇನೆಯ ಮಾಜಿ ಅಧಿಕಾರಿ ರಂಜಿತ್ ಕೆಕೆ ಅವರನ್ನು ವಿಚಾರಣೆಗೊಳಪಡಿಸಲಾಗಿದೆ.
ವಾಯುಸೇನೆಯಿಂದ ವಜಾಗೊಂಡಿರುವ ರಂಜಿತ್‌ಗೆ ಈ ಉಗ್ರ ದಾಳಿಯಲ್ಲಿ ಕೈವಾಡವಿದೆಯೇ ಎಂಬುದರ ಬಗ್ಗೆ ದೆಹಲಿ ಕ್ರೈಂ ಬ್ರಾಂಚ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪಠಾಣ್ ಕೋಟ್‌ನಲ್ಲಿ ಶನಿವಾರ ಮುಂಜಾನೆ ವಾಯುನೆಲೆಯ ಮೇಲೆ ಉಗ್ರರು ದಾಳಿ ಮಾಡಿದ್ದರು. ಈ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ .
ಭಾರತೀಯ ವಾಯುಸೇನೆಯಲ್ಲಿದ್ದ ರಂಜಿತ್ ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಂಧಿತನಾಗಿದ್ದನು. ಐಎಸ್‌ಐ ಜತೆ ರಂಜಿತ್ ಕೆಲವು ಮಾಹಿತಿ ಹಂಚಿಕೊಂಡಿದ್ದು, ವಾಯುಸೇನೆಯಿಂದ ಈತನನ್ನು ವಜಾಗೈಯ್ಯಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


