ದೇಶ

ದೆಹಲಿಯಲ್ಲೂ ದಾಳಿಗೆ ಸಂಚು: ಗುಪ್ತಚರ ಇಲಾಖೆ

ಇಬ್ಬರು ಜೈಶ್-ಎ-ಮೊಹಮ್ಮದ್ ಉಗ್ರರು ರಾಜಧಾನಿ ನವದೆಹಲಿಯೊಳಕ್ಕೆ ನುಸುಳಿದ್ದು, ಒತ್ತೆ ಸೇರಿದಂತೆ ಭಾರಿ ವಿಧ್ವಂಸಕ...

ದೆಹಲಿಯಲ್ಲೂ ದಾಳಿಗೆ ಸಂಚು: ಗುಪ್ತಚರ ಇಲಾಖೆ
ಸಂಗ್ರಹ ಚಿತ್ರ
Published On :
ನವದೆಹಲಿ: ಇಬ್ಬರು ಜೈಶ್-ಎ-ಮೊಹಮ್ಮದ್ ಉಗ್ರರು ರಾಜಧಾನಿ ನವದೆಹಲಿಯೊಳಕ್ಕೆ ನುಸುಳಿದ್ದು, ಒತ್ತೆ ಸೇರಿದಂತೆ ಭಾರಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. 
ಈ ಹಿನ್ನೆಲೆಯಲ್ಲಿ ದೆಹಲಿಯಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ದೆಹಲಿ ಪೊಲೀಸ್ ಆಯುಕ್ತ ಬಸ್ಸಿ ಅವರು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಟ್ಟೆಚ್ಚರ ಕೈಗೊಳ್ಳುವ ಬಗ್ಗೆ ಚರ್ಚಿಸಿದ್ದಾರೆ. 
ಇದೇ ವೇಳೆ, ದೇಶದಲ್ಲಿರುವ ಸುಮಾರು 3,600 ಕೇಂದ್ರೀಯ-ಭದ್ರತೆಯ ಸ್ಮಾರಕಗಳು ಹಾಗೂ ಪಾರಂಪರಿಕ ತಾಣಗಳಲ್ಲಿ ಹೆಚ್ಚುವರಿ ನಿಗಾ ವಹಿಸುವಂತೆ ಭಾರತೀಯ ಪುರಾತತ್ವ ಇಲಾಖೆ ಸೂಚನೆ ನೀಡಿದೆ. 
ಬಾಂಬ್ ಬೆದರಿಕೆ: ರೈಲಿನಲ್ಲಿ ತಪಾಸಣೆ:ಕಾನ್ಪುರಕ್ಕೆ ಹೊರಡುವ ಎಲ್ಲ ರೈಲುಗಳಲ್ಲೂ ಬಾಂಬ್ ಸ್ಫೋಟಿಸುತ್ತೇವೆ ಎಂಬ ಪತ್ರವೊಂದು ಮುಂಬೈ ರೈಲು ನಿಲ್ದಾಣಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ ದೆಹಲಿ-ಲಖನೌ ಶತಾಬ್ದಿ ಎಕ್ಸ್‍ಪ್ರೆಸ್ ರೈಲನ್ನು ಒಂದು ಗಂಟೆ ಕಾಲ ತಡೆದು, ತಪಾಸಣೆ ನಡೆಸಲಾಯಿತು. 
ಜತೆಗೆ, ವಾರಾಣಸಿಯಲ್ಲೂ ಹಲವು ರೈಲುಗಳಲ್ಲಿ ತಪಾಸಣೆ ನಡೆಯಿತು. ಆದರೆ, ಯಾವುದೇ ಸ್ಫೋಟಕಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ರೈಲುಗಳಿಗೆ ಸಂಚರಿಸಲು ಅವಕಾಶ ಕಲ್ಪಿಸಲಾಯಿತು. ಇದೇ ವೇಳೆ, ನಿಜಾಮುದ್ದೀನ್, ನವದೆಹಲಿ, ಓಲ್ಡ್ ಡೆಲ್ಲಿ, ಆನಂದ್ ವಿಹಾರ್ ರೈಲು ನಿಲ್ದಾಣಗಳಲ್ಲಿ ಭಾರಿ ಭದ್ರತೆ ಕೈಗೊಳ್ಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.