ದೇಶ

ಪಂಜಾಬ್ ನಲ್ಲಿ ಮೂವರು ಯುವಕರ ಬಂಧನ: ಉಗ್ರ ಸಂಘಟನೆಯೊಂದಿಗೆ ನಂಟಿರುವ ಶಂಕೆ

ಪಂಜಾಬ್ ಪೊಲೀಸರು ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಮೂವರು ಯುವಕರನ್ನು ಮೊಹಾಲಿಯಲ್ಲಿ ಬಂಧಿಸಿದ್ದಾರೆ.

ಪಂಜಾಬ್ ನಲ್ಲಿ ಮೂವರು ಯುವಕರ ಬಂಧನ: ಉಗ್ರ ಸಂಘಟನೆಯೊಂದಿಗೆ ನಂಟಿರುವ ಶಂಕೆ
ಪಂಜಾಬ್ ನಲ್ಲಿ ಮೂವರು ಯುವಕರ ಬಂಧನ
Published On :

ಮೊಹಾಲಿ: ಪಠಾಣ್ ಕೋಟ್ ವಾಯು ನೆಲೆ ಮೇಲೆ ನಡೆದ ಭಯೋತ್ಪಾದಕ ದಾಳಿ ಬೆನ್ನಲ್ಲೇ ಮಹತ್ವದ ಬೆಳವಣಿಗೆಯಲ್ಲಿ ಪಂಜಾಬ್ ಪೊಲೀಸರು ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಮೂವರು ಯುವಕರನ್ನು ಮೊಹಾಲಿಯಲ್ಲಿ ಬಂಧಿಸಿದ್ದಾರೆ.

ಬಂಧಿತ ಯುವಕರಿಂದ ಸಿಮ್ ಕಾರ್ಡ್ ಗಳು, ಎರಡು ಎಕೆ 47 ರೈಫಲ್ ಗಳು ಐದು ಪಿಸ್ತೂಲು ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರು ಪಾಕಿಸ್ತಾನದ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಶಂಕಿಸಲಾಗಿದ್ದು ಗುರುತು ಪತ್ತೆ ಮಾಡಲು ಅಧಿಕಾರಿಗಳು ಯುವಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಪಠಾಣ್ ಕೋಟ್ ವಾಯು ನೆಲೆ ಮೇಲೆ ದಾಳಿ ನಡೆದ ಬೆನ್ನಲ್ಲೇ ಪಾಕ್ ಸಿಮ್ ಕಾರ್ಡ್, ಪಾಕ್ ನಿರ್ಮಿತ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಯುವಕರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.