ಪಠಾಣ್ ಕೋಟ್ ಉಗ್ರ ದಾಳಿ ವಿಷಯದಲ್ಲಿ ಪ್ರಧಾನಿ ಮೋದಿ ಪ್ರತಿಪಕ್ಷಗಳ ಸಲಹೆ ಪಡೆಯಬೇಕು: ಕಾಂಗ್ರೆಸ್
ಪಠಾಣ್ ಕೋಟ್ ವಾಯು ನೆಲೆ ಮೇಲೆ ನಡೆದಿರುವ ಭಯೋತ್ಪಾದಕ ದಾಳಿ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷಗಳ ಸಲಹೆ ಪಡೆಯಬೇಕು ಎಂದು ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ.

ನವದೆಹಲಿ: ಪಠಾಣ್ ಕೋಟ್ ವಾಯು ನೆಲೆ ಮೇಲೆ ನಡೆದಿರುವ ಭಯೋತ್ಪಾದಕ ದಾಳಿ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷಗಳ ಸಲಹೆ ಪಡೆಯಬೇಕು ಎಂದು ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ.
ಭಯೋತ್ಪಾದಕ ದಾಳಿ ಘಟನೆ ವಿಷಯದಲ್ಲಿ ಪ್ರಧಾನಿ ಮೋದಿ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿಪಕ್ಷಗಳ ಸಲಹೆ ಕೇಳುವುದು ಸೂಕ್ತ ಎಂದು ಕಾಂಗ್ರೆಸ್ ವಕ್ತಾರ ಆನಂದ್ ಶರ್ಮಾ ಹೇಳಿದ್ದಾರೆ. ಪಠಾಣ್ ಕೋಟ್ ನ ವಾಯು ನೆಲೆ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 7 ಮಂದಿ ಭದ್ರತಾ ಸಿಬ್ಬಂದಿಗಳು ಸಾವನ್ನಪ್ಪಿದ್ದರು.
ಕಾಂಗ್ರೆಸ್ ಈ ದಾಳಿಯನ್ನು ದೇಶದ ಮೇಲೆ ನಡೆದ ದಾಳಿ ಎಂದು ಹೇಳಿದ್ದು, ಮೋದಿ ಈ ವಿಷಯದಲ್ಲಿ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


