ಚುನಾವಣಾ ಟೇಪ್ ವಿವಾದ: ಕಾಂಗ್ರೆಸ್ ನಿಂದ ಅಮಿತ್ ಜೋಗಿ ಉಚ್ಛಾಟನೆ
ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿ ಅವರನ್ನು ಬುಧವಾರ ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ...

ನವದೆಹಲಿ: ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ.
ಛತ್ತೀಸ್ ಗಢ ಚುನಾವಣಾ ಸಂಬಂಧ ಅಮಿತ್ ಜೋಗಿ ಹಾಗೂ ಮುಖ್ಯಮಂತ್ರಿ ರಮಣ್ ಸಿಂಗ್ ಅವರ ಅಳಿಯ ಪುನೀತ್ ಗುಪ್ತಾ ನಡುವೆ ನಡೆದಿದ್ದ ದೂರವಾಣಿ ಸಂಭಾಷಣೆಯ ಅಂಶಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ಆರೋಪದ ಮೇಲೆ ಅಮಿತ್ ಜೋಗಿ ಅವರನ್ನು ಉಚ್ಛಾಟಿಸಲಾಗಿದೆ ಎಂದು ತಿಳಿದುಬಂದಿದೆ.
ನವದೆಹಲಿಯಲ್ಲಿ ನಡೆದಿದ್ದ ದೂರವಾಣಿ ಸಂಭಾಷಣೆ ಮುದ್ರಿತ ಅಂಶಗಳ ಬಿಡುಗಡೆ ವಿಚಾರ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೆ ಕಾಂಗ್ರೆಸ್ ಪಕ್ಷದ ತೀವ್ರ ಮುಜುಗರಕ್ಕೂ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಇಂದು ಅಮಿತ್ ಜೋಗಿ ಅವರನ್ನು ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿ ಉಚ್ಛಾಟನೆ ಮಾಡಿದೆ.
ಕಳೆದ ವರ್ಷ ನಡೆದ ಅಂತಗದ್ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಂತುರಾಮ್ ಪವಾರ್ ಮತ್ತು ಅಮಿತ್ ಜೋಗಿ ಹಾಗೂ ಅವರ ನಿಕಟವರ್ತಿಗಳಾದ ಫಿರೋಜ್ ಸಿದ್ದಿಕಿ, ಅಮೀನ್ ಮೆನನ್ ಸಹವರ್ತಿ ಪುನೀತ್ ಮೆನನ್ ಅವರ ನಡುವೆ ನಡೆದ ಮಾತುಕತೆಗಳ ವಿವರಗಳು ಪತ್ರಿಕೆಯಲ್ಲಿ ಬಹಿರಂಗಗೊಂಡಿತ್ತು. ಈ ವಿಚಾರ ಪ್ರತಿಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿತ್ತು. ಅಲ್ಲದೆ ಕಾಂಗ್ರೆಸ್ ಪಕ್ಷ ತೀವ್ರ ಮುಜುಗರಕ್ಕೆ ಒಳಗಾಗುವಂತೆ ಮಾಡಿತ್ತು, ಪವಾರ್ ಅವರು ಚುನಾವಣೆಯಲ್ಲಿ ಕೊನೆ ಕ್ಷಣದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದ ಪರಿಣಾಮ ಆಡಳಿತಾರೂಢ ಬಿಜೆಪಿ ಪಕ್ಷದ ಅಭ್ಯರ್ಥಿ ಅನಾಯಾಸವಾಗಿ ಈ ಸ್ಥಾನವನ್ನು ಗೆದ್ದುಕೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


