ಭಾರಿ ಪ್ರತಿಭಟನೆಯ ನಡುವೆಯೇ ಎಫ್‌ಟಿಐಐ ಅಧ್ಯಕ್ಷರಾಗಿ ಚೌಹಾಣ್ ಪದಗ್ರಹಣ
ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ ಹಾಗೂ ಹಲವು ನಾಟಕೀಯ ಬೆಳವಣಿಗೆಗಳ ನಡುವೆಯೇ ಕಿರುತೆರೆ ಕಲಾವಿದ ಹಾಗೂ ಬಿಜೆಪಿ ನಾಯಕ ಗಜೇಂದ್ರ ಚೌಹಾಣ್ ಅವರು...

Published On :
ಪುಣೆ: ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ ಹಾಗೂ ಹಲವು ನಾಟಕೀಯ ಬೆಳವಣಿಗೆಗಳ ನಡುವೆಯೇ ಕಿರುತೆರೆ ಕಲಾವಿದ ಹಾಗೂ ಬಿಜೆಪಿ ನಾಯಕ ಗಜೇಂದ್ರ ಚೌಹಾಣ್ ಅವರು ಗುರುವಾರ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯ(ಎಫ್‌ಟಿಐಐ) ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ಎಫ್‌ಟಿಐಐ ಮುಖ್ಯಸ್ಥರಾಗಿ ಗಜೇಂಜ್ರ ಚೌಹಾಣ್ ಅವರು ಇಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ಎಫ್‌ಟಿಐಐ ಆಡಳಿತ ಮಂಡಳಿ ತಿಳಿಸಿದೆ.
ಈ ಮಧ್ಯೆ ಇಂದು ಅಧಿಕಾರ ಸ್ವೀಕರಿಸಲು ಚೌಹಾಣ್ ಅವರು ಎಫ್‌ಟಿಐಐ ಕಚೇರಿಗೆ ಆಗಮಿಸುತ್ತಿದ್ದಂತೆ, ಅವರ ನೇಮಕವನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಡ್ರಮ್‌ಗಳನ್ನು ಬಾರಿಸಿ, ಗಜೇಂದ್ರ ಚೌಹಾಣ್ ಮರಳಿ ಹೋಗು ಎಂಬ ಭಿತ್ತಿಫಲಕಗಳನ್ನು ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದರು.
ಚೌಹಾಣ್ ಅವರ ಕಾರು ಎಫ್‌ಟಿಐಐ ಆವರಣ ಪ್ರವೇಶಿಸುತ್ತಿದ್ದಂತೆಯೇ ಧರಣಿ ನಿರತರು ಘೋಷಣೆಗಳನ್ನು ಕೂಗಿದರು. ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


