ದೇಶ

ಗುರದಾಸ್ಪುರ, ಪಠಾಣ್ ಕೋಟ್ ಜೆಲ್ಲೆಯಲ್ಲಿ ಹೈ ಅಲರ್ಟ್

ಉಗ್ರರ ದಾಳಿಯ ಬಳಿಕವೂ ಪಠಾಣ್ ಕೋಟ್ ಹಾಗೂ ಗುರದಾಸ್ಪುರ ಜಿಲ್ಲೆಯಲ್ಲಿ ಕೂಂಬಿಂಗ್ ಕಾರ್ಯಾಚರಣೆ ಮುಂದುವರೆದಿದ್ದು,...

ಗುರದಾಸ್ಪುರ, ಪಠಾಣ್ ಕೋಟ್ ಜೆಲ್ಲೆಯಲ್ಲಿ ಹೈ ಅಲರ್ಟ್
ಸಾಂದರ್ಭಿಕ ಚಿತ್ರ
Published On :
ಗುರದಾಸ್ಪುರ: ಉಗ್ರರ ದಾಳಿಯ ಬಳಿಕವೂ ಪಠಾಣ್ ಕೋಟ್ ಹಾಗೂ ಗುರದಾಸ್ಪುರ ಜಿಲ್ಲೆಯಲ್ಲಿ ಕೂಂಬಿಂಗ್ ಕಾರ್ಯಾಚರಣೆ ಮುಂದುವರೆದಿದ್ದು, ಎರಡು ಜಿಲ್ಲೆಗಳಲ್ಲೂ ಹೈಅಲರ್ಟ್ ಘೋಷಿಸಲಾಗಿದೆ.
ಟಿಬ್ರಿ ಮಿಲಿಟರಿ ಕಾಂಟೊನ್ಮೆಂಟ್ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಅನುಮಾನಸ್ಪದವಾಗಿ ಓಡಾಡುತ್ತಿದ್ದಾರೆ ಎಂದು ಸ್ಥಳೀಯರು ಹೇಳಿದ ನಂತರ ಭದ್ರತೆಯನ್ನು ಮತಷ್ಟು ಹೆಚ್ಚಿಸಲಾಗಿದೆ.
ಕಾಂಟೊನ್ಮೆಂಟ್ ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದ್ದು, ಇದುವರೆಗೂ ಯಾವುದೇ ಅನುಮಾನಸ್ಪದ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
'ಇದುವರೆಗೂ ಯಾವುದೇ ಅನುಮಾನಸ್ಪದ ವ್ಯಕ್ತಿಗಳ ಚಲನವಲನ ಪತ್ತೆಯಾಗಿಲ್ಲ. ಆದರೂ ಭದ್ರತಾ ಸಿಬ್ಬಂದಿ ಕಾಂಟೊನ್ಮೆಂಟ್ ಪ್ರದೇಶವನ್ನು ಸುತ್ತುವರೆದಿದ್ದು, ತೀವ್ರ ತಪಾಸಣೆ ನಡೆಸುತ್ತಿದ್ದಾರೆ' ಎಂದು ಗುರದಾಸ್ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುರಪ್ರೀತ್ ಸಿಂಗ್ ಅವರು ಹೇಳಿದ್ದಾರೆ.
'ಈ ಪ್ರದೇಶದಲ್ಲಿ ಸಂಚರಿಸುವ ಪ್ರತಿಯೊಂದು ವಾಹನ ಹಾಗೂ ವ್ಯಕ್ತಿಗಳನ್ನು ತೀವ್ರ ತಾಪಸಣೆಗೆ ಒಳಪಡಿಸಲಾಗುತ್ತಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಗುರದಾಸ್ಪುರ ಹಾಗೂ ಪಠಾಣ್ ಕೋಟ್ ಈ ಎರಡೂ ಗಡಿ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ' ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.