ಅಲ್ ಖೈದಾ ನಂಟು: ಬೆಂಗಳೂರು ಮದರಸ ಶಿಕ್ಷಕನ ಬಂಧನ
ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹಿನ್ನೆಲೆ ಬಂಧಕ್ಕೀಡಾಗಿರುವ ಬೆಂಗಳೂರು ಮದರಸ ಶಿಕ್ಷಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ...

ನವದೆಹಲಿ: ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹಿನ್ನೆಲೆ ಬಂಧಕ್ಕೀಡಾಗಿರುವ ಬೆಂಗಳೂರು ಮದರಸ ಶಿಕ್ಷಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮೌಲಾನ ಸೈಯದ್ ಅನ್ಸರ್ ಶಾ ಖಾಸ್ಮಿ ಎಂದು ಗುರುತಿಸಲಾಗಿದ್ದು, ದೆಹಲಿ ಸ್ಪೇಷಲ್ ಸೇಲ್ ಪೊಲೀಸರು ಗುರುವಾರ ಬೆಂಗಳೂರಿನಲ್ಲಿ ಬಂಧಿಸಿ, ದೆಹಲಿಯ ಪಟಿಯಾಲ ಕೋರ್ಟ್ ಗೆ ಹಾಜರುಪಡಿಸಿದ್ದು, ಕೋರ್ಟ್ ಜನವರಿ 20ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.
ದೆಹಲಿ ಪೊಲೀಸರ ವಿಚಾರಣೆ ವೇಳೆ ಸೈಯದ್ ಅನ್ಸರ್ ಶಾ ಭಯಾನಕ ವಿಚಾರಗಳನ್ನು ಬಾಯ್ಬಿಟ್ಟಿದ್ದಾನೆ. ಬೆಂಗಳೂರಿನ ಬನಶಂಕರಿಯ ಇಲಿಯಾಸ್ ನಗರದಲ್ಲಿ ವಾಸವಾಗಿದ್ದು ಅಲ್ ಖೈದಾ ಸಂಘಟನೆ ಪರವಾಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಉಗ್ರವಾದಕ್ಕೆ ಯುವಕರನ್ನು ಪ್ರಚೋಧಿಸುತ್ತಿದ್ದ ಹಾಗೂ ಉಗ್ರರಿಗೆ ಹಣಕಾಸು ನೆರವು ನೀಡುತ್ತಿದ್ದ. ಅಲ್ಲದೆ ದೇಶದ ಹಲವೆಡೆ ಸ್ಫೋಟಗಳನ್ನು ನಡೆಸಲು ಸಂಚು ರೂಪಿಸಲಾಗಿದೆ ಎಂಬ ಆಘಾತಕಾರಿ ಮಾಹಿತಿಗಳನ್ನು ಹೇಳಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


