ದೇಶ

ನಕ್ಸಲರಿಂದ ನೆಲ ಬಾಂಬ್ ಸ್ಫೋಟ: ಬಿಎಸ್‌ಎಫ್ ಅಧಿಕಾರಿ, ಜವಾನ ಸಾವು

ಒಡಿಶಾದ ಕೊರಪುಟ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಗಸ್ತು ತಿರುಗುತ್ತಿದ್ದ ವೇಳೆ ನಕ್ಸಲರು ನೆಲ ಬಾಂಬ್ ಸ್ಫೋಟಿಸಿದ್ದು,...

ನಕ್ಸಲರಿಂದ ನೆಲ ಬಾಂಬ್ ಸ್ಫೋಟ: ಬಿಎಸ್‌ಎಫ್ ಅಧಿಕಾರಿ, ಜವಾನ ಸಾವು
ಸಾಂದರ್ಭಿಕ ಚಿತ್ರ
Published On :
ಭುವನೇಶ್ವರ: ಒಡಿಶಾದ ಕೊರಪುಟ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಗಸ್ತು ತಿರುಗುತ್ತಿದ್ದ ವೇಳೆ ನಕ್ಸಲರು ನೆಲ ಬಾಂಬ್ ಸ್ಫೋಟಿಸಿದ್ದು, ಘಟನೆಯಲ್ಲಿ ಓರ್ವ ಬಿಎಸ್‌ಎಫ್ ಅಧಿಕಾರಿ ಹಾಗೂ ಓರ್ವ ಜವಾನ ಮೃತಪಟ್ಟಿದ್ದಾರೆ.
ಇಂದು ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಬೈಕ್‌ನಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಘಟನೆ ನಡೆದಿದ್ದು, ಬೈಕ್ ಚಾಲನೆ ಮಾಡುತ್ತಿದ್ದ ಪೇದೆ ಎ.ಪಿ.ಪಾಂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿದ್ದ ಅದೇ ಬೈಕ್‌ನಲ್ಲಿ ಹಿಂದೆ ಕುಳಿತಿದ್ದ ಡೆಪ್ಯೂಟಿ ಕಮಾಂಡೆಂಟ್ ಸುನಿಲ್ ಕುಮಾರ್ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ನಕ್ಸಲರು ರಸ್ತೆಯ ಕೆಳಗೆ ಐಇಡಿ ಸ್ಫೋಟಕವನ್ನಿಟ್ಟು ಸ್ಫೋಟಿಸಿದ್ದಾರೆ. ಸ್ಫೋಟದ ತೀವ್ರತೆಗೆ ಬೈಕ್ ಸಂಪೂರ್ಣ ಛಿದ್ರ ಛಿದ್ರವಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.