ಪ. ಬಂಗಾಳದಲ್ಲಿ ಕೋಮು ವೈಷಮ್ಯಗಳೇನೂ ಇಲ್ಲ: ಮಮತಾ ಬ್ಯಾನರ್ಜಿ
ನಮ್ಮ ರಾಜ್ಯದಲ್ಲಿ ಯಾವುದೇ ರೀತಿಯ ಕೋಮು ವೈಷಮ್ಯವಿಲ್ಲವೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ನೇತಾರೆ ಮಮತಾ...

Published On :
ಕೊಲ್ಕತ್ತಾ: ನಮ್ಮ ರಾಜ್ಯದಲ್ಲಿ ಯಾವುದೇ ರೀತಿಯ ಕೋಮು ವೈಷಮ್ಯವಿಲ್ಲವೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ನೇತಾರೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕೊಲ್ಕತ್ತಾದಲ್ಲಿ ನಡೆಯುತ್ತಿರುವ ಬಂಗಾಳ ಗ್ಲೋಬಲ್ ಬ್ಯುಸಿನೆಸ್ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ವಿವಿಧತೆಯಲ್ಲಿ ಏಕತೆ ಇದೆ ಎಂದಿದ್ದಾರೆ.
ಅದೇ ವೇಳೆ ರಾಜ್ಯದಲ್ಲಿ ಮಾವೋಗಳ ಅಟ್ಟಹಾಸವೂ ಕಡಿಮೆಯಾಗಿದೆ. ಗಿರಿಪ್ರದೇಶಗಳಲ್ಲಿ ವಾಸಿಸುವ ಜನರೂ ಖುಷಿಯಿಂದಿದ್ದಾರೆ, ಇಲ್ಲಿ ಯಾವುದೇ ಸಂಘರ್ಷಗಳಿಲ್ಲ ಎಂದು ಮಮತಾ ಹೇಳಿದ್ದಾರೆ.
ಕಳೆದ ಭಾನುವಾರ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಒಂದು ಲಕ್ಷದಷ್ಟು ಪ್ರತಿಭಟನಾಕಾರರು ಕಾಲಿಯಾಚಾಕ್‌ನಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ, ಇನ್ನಿತರ ವಾಹನಗಳನ್ನು ನಾಶಗೈದಿದ್ದರು. ಈ ಗಲಭೆ ನಡೆದು 5 ದಿನಗಳ ನಂತರ ಮಮತಾ ಬ್ಯಾನರ್ಜಿ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪಶ್ಚಿಮ ಬಂಗಾಳWest BengalKolkataಕೊಲ್ಕತ್ತಾTrinamool CongressMamata Banerjeeಮಮತಾ ಬ್ಯಾನರ್ಜಿತೃಣಮೂಲ ಕಾಂಗ್ರೆಸ್violenceMaldaಮಾಲ್ಡಾBengal Global Business Summitಹಿಂಸ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


