ದೇಶ

ಅಪ್ರಾಪ್ತನಿಂದ 9ನೇ ತರಗತಿ ವಿದ್ಯಾರ್ಥಿನಿ ಅಪಹರಿಸಿ, ಕಾರಿನಲ್ಲಿ ಅತ್ಯಾಚಾರ

ಗೊಹನ-ದೆಹಲಿ ರಸ್ತೆಯಲ್ಲಿ ಟ್ಯೂಷನ್‌ಗೆ ತೆರಳುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ, ಕಾರಿನಲ್ಲಿ ಅತ್ಯಾಚಾರ...

ಅಪ್ರಾಪ್ತನಿಂದ 9ನೇ ತರಗತಿ ವಿದ್ಯಾರ್ಥಿನಿ ಅಪಹರಿಸಿ, ಕಾರಿನಲ್ಲಿ ಅತ್ಯಾಚಾರ
ಸಾಂದರ್ಭಿಕ ಚಿತ್ರ
Published On :
ರೋಹಟಕ್: ಗೊಹನ-ದೆಹಲಿ ರಸ್ತೆಯಲ್ಲಿ ಟ್ಯೂಷನ್‌ಗೆ ತೆರಳುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ, ಕಾರಿನಲ್ಲಿ ಅತ್ಯಾಚಾರ ಎಸಗಿದ ಘಟನೆ ನಡೆದಿದೆ ಎಂದು ದೆಹಲಿ ಪೊಲೀಸರು ಶನಿವಾರ ತಿಳಿಸಿದ್ದಾರೆ.
ಆರೋಪಿ 17 ವರ್ಷದ ಆಪ್ರಾಪ್ತ ಬಾಲಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜನವರಿ 7ರಂದು ಸಂಜೆ ಟ್ಯೂಷನ್‌ಗೆ ತೆರಳುತ್ತಿದ್ದ ವೇಳೆ, ಬಾಲಕನೊಬ್ಬ ತನ್ನನ್ನು ಅಪಹರಿಸಿ, ಕಾರಿನಲ್ಲಿ ಅತ್ಯಾಚಾರ ಎಸಗಿ, ಬಳಿಕ ಸುಮಾರು 10 ಗಂಟೆಯ ಸುಮಾರಿಗೆ ಸುಖ್‌ಪುರ ಚೌಕ್ ಬಳಿ ಬಿಟ್ಟು ಹೋದ ಎಂದು ವಿದ್ಯಾರ್ಥಿನಿ ದೂರಿನಲ್ಲಿ ಆರೋಪಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಆರೋಪಿಯ ವಿರುದ್ಧ ನಾವು ಅತ್ಯಾಚಾರ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಮಹಿಳಾ ಪೊಲೀಸ್ ಠಾಣೆಯ ಉಸ್ತುವಾರಿ ಇನ್ಸ್‌ಪೆಕ್ಟರ್ ಗರಿಮಾ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.