ಸಮ-ಬೆಸ ಪರೀಕ್ಷಾರ್ಥ ಪ್ರಯೋಗ ಜನವರಿ 15ಕ್ಕೆ ಅಂತ್ಯ: ದೆಹಲಿ ಸರ್ಕಾರ
ರಾಜಧಾನಿ ದೆಹಲಿಯಲ್ಲಿನ ವಾಯುಮಾಲಿನ್ಯವನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ದೆಹಲಿ ಸರ್ಕಾರ ಕೈಗೊಂಡಿದ್ದ ಸಮ-ಬೆಸ ಸಂಖ್ಯೆ ಪರಿಕ್ಷಾರ್ಥ ಪ್ರಯೋಗ ಇದೇ ಜನವರಿ 15ಕ್ಕೆ ಮುಕ್ತಾಯಗೊಳ್ಳಲಿದೆ...

ನವದೆಹಲಿ: ರಾಜಧಾನಿ ದೆಹಲಿಯಲ್ಲಿನ ವಾಯುಮಾಲಿನ್ಯವನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ದೆಹಲಿ ಸರ್ಕಾರ ಕೈಗೊಂಡಿದ್ದ ಸಮ-ಬೆಸ ಸಂಖ್ಯೆ ಪರಿಕ್ಷಾರ್ಥ ಪ್ರಯೋಗ ಇದೇ ಜನವರಿ 15ಕ್ಕೆ ಮುಕ್ತಾಯಗೊಳ್ಳಲಿದೆ ಎಂದು ದೆಹಲಿ ಸರ್ಕಾರ ಶನಿವಾರ ಸ್ಪಷ್ಟಪಡಿಸಿದೆ.
ಜನವರಿ 15ರ ಬಳಿಕ ಈ ಮಾದರಿ ಇರುವುದಿಲ್ಲ. ಸಾಮಾನ್ಯದಂತೆ ಎಲ್ಲ ಸಂಖ್ಯೆಯ ವಾಹನಗಳು ಚಲಿಸಬಹುದು ಎಂದು ದೆಹಲಿಯ ಸಾರಿಗೆ ಸಚಿವ ಗೋಪಾಲ್ ರಾಯ್ ಅವರು ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, "ಸರ್ಕಾರದ ಈ ನೂತನ ಯೋಜನೆಯ ಸಾಧಕ-ಭಾಧಕಗಳು ಕುರಿತು ಚರ್ಚೆ ನಡೆಯಲಿದೆ. ಅಧಿಕಾರಿಗಳಿಂದ ಯೋಜನೆಯ ಕುರಿತು ಅಂಕಿ-ಅಂಶಗಳ ಮಾಹಿತಿ ಪಡೆಯಲಾಗುತ್ತಿದೆ. ಜನವರಿ 15ರ ಬಳಿಕ ಸರ್ಕಾರದ ಈ ಯೋಜನೆಯನ್ನು ಅಂತ್ಯಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಶನಿವಾರ ದೆಹಲಿ ಕೋರ್ಟ್ ಗೆ ಮಾಹಿತಿ ನೀಡಿದ ದೆಹಲಿ ಸರ್ಕಾರ, ಯೋಜನೆ ಕುರಿತಂತೆ ಈಗಾಗಲೇ ಅಧಿಕಾರಿಗಳಿಂದ ಮಾಹಿತಿ ಕೇಳಲಾಗಿದೆ. ಮಾಹಿತಿ ಬಂದ ಬಳಿಕ ಅವುಗಳ ಸಾಧಕ-ಭಾದಕಗಳನ್ನು ಚರ್ಚಿಸಿ ಸಮ-ಬೆಸ ಯೋಜನೆಯನ್ನು ಮುಂದುವರೆಸುವ ಅಥವಾ ಕೈಬಿಡುವ ಕುರಿತು ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದೆ. ಇನ್ನು ಇದೇ ಪ್ರಕರಣ ಸಂಬಂಧ ದೆಹಲಿ ಸರ್ಕಾರದ ನಿರ್ಧಾರದ ವಿರುದ್ಧ ನ್ಯಾಯಾಲಯಕ್ಕೆ ಸಾಕಷ್ಟು ಅರ್ಜಿಗಳು ಬಂದಿದ್ದು, ಪ್ರಕರಣದ ತೀರ್ಪನ್ನು ಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ಇದಕ್ಕೂ ಮೊದಲು ನಡೆದ ವಿಚಾರಣೆಯಲ್ಲಿ ಸಮ-ಬೆಸ ಸಂಖ್ಯೆ ಮಾದರಿ ಯೋಜನೆಯನ್ನು ಸ್ಥಗಿತಗೊಳಿಸಲು ಸಾಧ್ಯವೇ ಎಂದು ದೆಹಲಿ ನ್ಯಾಯಾಲಯ ಸರ್ಕಾರವನ್ನು ಕೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


