ದೇಶ

ಯುರೋಪ್ ಪ್ರವಾಸದಿಂದ ಮರಳಿದ ರಾಹುಲ್ ಗಾಂಧಿಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ?

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಭಾನುವಾರ ಯುರೋಪ್ ಪ್ರವಾಸದಿಂದ ದೆಹಲಿಗೆ ವಾಪಸ್ ಆಗುವ ಮೂಲಕ ಎಲ್ಲಾ ಊಹಾಪೋಹಗಳಿಗೂ ತೆರೆ...

ಯುರೋಪ್ ಪ್ರವಾಸದಿಂದ ಮರಳಿದ ರಾಹುಲ್ ಗಾಂಧಿಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ?
ರಾಹುಲ್ ಗಾಂಧಿ
Published On :
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಭಾನುವಾರ ಯುರೋಪ್ ಪ್ರವಾಸದಿಂದ ದೆಹಲಿಗೆ ವಾಪಸ್ ಆಗುವ ಮೂಲಕ ಎಲ್ಲಾ ಊಹಾಪೋಹಗಳಿಗೂ ತೆರೆ ಎಳೆದಿದ್ದಾರೆ.
ರಾಹುಲ್ ಗಾಂಧಿ ವಿದೇಶ ಪ್ರವಾಸದಿಂದ ವಾಪಸ್ ಬರುತ್ತಿದ್ದಂತೆ ಪಕ್ಷದ ಅಧ್ಯಕ್ಷ ಗಾದಿಗೇರುವ ಸಿದ್ಧತೆ ನಡೆಸಿದ್ದು, ಸದ್ಯದಲ್ಲೇ ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಪುನಾರಚನೆಯಾಗಲಿದೆ.
ರಾಹುಲ್ ಗಾಂಧಿ ಅವರು ಕಳೆದ ವರ್ಷ ಡಿಸೆಂಬರ್ 28ರಂದು ಯುರೋಪ್ ಪ್ರವಾಸಕ್ಕೆ ತೆರಳುವುದಾಗಿ ಟ್ವಿಟರ್ ಮೂಲಕ ತಿಳಿಸಿದ್ದರು. ಇದು ಹಲವು ಊಹಾಪೋಹಗಳಿಗೆ ಕಾರಣವಾಗಿತ್ತು. ಅಲ್ಲದೆ ರಾಹುಲ್ ಗಾಂಧಿ ಅವರು ಯುರೋಪ್ ಪ್ರವಾಸದಿಂದ ಮರಳಿದ ಬಳಿಕ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಅಲ್ಲಿ ಪಕ್ಷದ ಅಧ್ಯಕ್ಷ ಹುದ್ದೆಯನ್ನು ಸೋನಿಯಾ ಗಾಂಧಿ ಅವರಿಂದ ರಾಹುಲ್‌ ಗಾಂಧಿ ಅವರಿಗೆ ವರ್ಗಾಯಿಸುವ ಮಹತ್ವದ ನಿರ್ಣಯ ಕೈಗೊಳ್ಳಲಾಗುವುದು ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದವು.
'ನಾನು ಕೆಲವು ದಿನಗಳ ಮಟ್ಟಿಗೆ ಯುರೋಪ್ ಪ್ರವಾಸ ಹೋಗುತ್ತಿದ್ದೇನೆ; ಎಲ್ಲರಿಗೂ ಹೊಸ ವರ್ಷದ ಶುಭಾಶಯ'; ಎಂದು ವಿದೇಶ ಪ್ರವಾಸಕ್ಕೆ ತೆರಳುವ ಮುನ್ನ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.