ಬೆಸ-ಸಮ ನಿಯಮ ವಿಸ್ತರಣೆ ಇಲ್ಲ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಾಯೋಗಿಕವಾಗಿ ಜಾರಿಯಲ್ಲಿರುವ ಬೆಸ-ಸಮ ಸಂಖ್ಯೆಯ ವಾಹನ ಸಂಚಾರ ನಿಯಮವು ಜ. 15ರ ಬಳಿಕ ವಿಸ್ತರಣೆ ಮಾಡುವುದಿಲ್ಲ...

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಾಯೋಗಿಕವಾಗಿ ಜಾರಿಯಲ್ಲಿರುವ ಬೆಸ-ಸಮ ಸಂಖ್ಯೆಯ ವಾಹನ ಸಂಚಾರ ನಿಯಮವು ಜ. 15ರ ಬಳಿಕ ವಿಸ್ತರಣೆ ಮಾಡುವುದಿಲ್ಲ. ಇದನ್ನೇ ಮುಂದುವರಿಸಲಾಗುತ್ತದೆ ಎಂಬ ವರದಿಗಳು ಆಧಾರ ರಹಿತ ಎಂದು ದೆಹಲಿ ಸಾರಿಗೆ ಸಚಿವ ಗೋಪಾಲ ರಾಯ್ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ದೆಹಲಿ ಹೈಕೋರ್ಟ್ ಗೆ ಅರಿಕೆ ಮಾಡಿಕೊಂಡಿದ್ದ ಕೇಜ್ರಿವಾಲ್ ಸರ್ಕಾರ ನಿಯಮ ವಿಸ್ತರಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿತ್ತು. ಆದರೆ ಈ ಬಗ್ಗೆ ಜ.11ರಂದು ಹೈಕೋರ್ಟ್ ವಿಚಾರಣೆ ನಡೆಸಲಿದ್ದು ಆ ದಿನ ತೀರ್ಮಾನ ಪ್ರಕಟಿಸಲಿದೆ. ಜ.1ರಿಂದ 8 ರ ಅವಧಿಯಲ್ಲಿ ದೆಹಲಿ ಪೊಲೀಸ್ ಇಲಾಖೆ ನಿಯಮ ಉಲ್ಲಂಘಿಸಿದವರ ವಿರುದ್ಧ 5,893 ಕೇಸುಗಳನ್ನು ದಾಖಲಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


