3 ಮಂದಿರಗಳನ್ನು ಕೊಟ್ಟು, 39 ಸಾವಿರ ಮಸೀದಿಗಳನ್ನು ಉಳಿಸಿಕೊಳ್ಳಿ: ಮುಸ್ಲಿಮರಿಗೆ ಸ್ವಾಮಿ ಆಫರ್
ರಾಮ ಮಂದಿರ ನಿರ್ಮಾಣ ವಿಷಯದಲ್ಲಿ ಸಕ್ರಿಯವಾಗಿರುವ ಬಿಜೆಪಿ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ, ರಾಮ ಮಂದಿರ ನಿರ್ಮಾಣ ವಿಷಯದಲ್ಲಿ ಮುಸ್ಲಿಮರ ಮನವೊಲಿಸಲು ಯತ್ನಿಸಿದ್ದಾರೆ.

ನವದೆಹಲಿ: ರಾಮ ಮಂದಿರ ನಿರ್ಮಾಣ ವಿಷಯದಲ್ಲಿ ಸಕ್ರಿಯವಾಗಿರುವ ಬಿಜೆಪಿ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ, ರಾಮ ಮಂದಿರ ನಿರ್ಮಾಣ ವಿಷಯದಲ್ಲಿ ಮುಸ್ಲಿಮರ ಮನವೊಲಿಸಲು ಯತ್ನಿಸಿದ್ದಾರೆ.
3 ಮಂದಿರಗಳನ್ನು ನಮಗೆ ಕೊಟ್ಟು, 39 , 997 ಮಸೀದಿಗಳನ್ನು ಉಳಿಸಿಕೊಳ್ಳಿ ಎಂದು ಮುಸ್ಲಿಮರಿಗೆ ಹೇಳಿರುವ ಸುಬ್ರಹ್ಮಣಿಯನ್ ಸ್ವಾಮಿ ಮುಸ್ಲಿಂ ಸಮುದಾಯಕ್ಕೆ ಹಿಂದೂಗಳಿಂದ ಶ್ರೀಕೃಷ್ಣ ಪರಮಾತ್ಮನ ಪ್ಯಾಕೇಜ್ ನೀಡಲಾಗುತ್ತಿದ್ದು ಮುಸ್ಲಿಮರು ದುರ್ಯೋದನನಂತೆ ವರ್ತಿಸುವುದಿಲ್ಲ ಎಂಬ ನಂಬಿಕೆ ಇದೆ ಎಂದಿದ್ದಾರೆ.
ಈ ಹಿಂದೆ ರಾಮ ಮಂದಿರ ನಿರ್ಮಾಣ ವಿಷಯವನ್ನು ರಾಜಕೀಯ ವಿಷಯವನ್ನಾಗಿ ಪರಿಗಣಿಸಬಾರದು ಎಂದು ಸ್ವಾಮಿ ಹೇಳಿದ್ದರು. ನಾವು ಮಂದಿರವನ್ನು ಈ ವರ್ಷ ನಿರ್ಮಿಸಲು ಸಾಧ್ಯವಾಗದಿರಬಹುದು. ಆದರೆ ಮುಂದಿನ ವರ್ಷ ಚುನಾವಣೆ ಇದು ಅದರ ಮುಂದಿನ ವರ್ಷ ಅಂದರೆ 2018ರಲ್ಲಿ ಮಂದಿರ ನಿರ್ಮಾಣ ಮಾಡುತ್ತೇವೆ.
ನಿನ್ನೆ ದೆಹಲಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಉಪನ್ಯಾಸಕ್ಕೆ ಕೆಲ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಸ್ವಾಮಿ, ಇದು ಅಸಹಿಷ್ಣುತೆ ಎಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


