ಬಿಹಾರದಲ್ಲಿ ಎಎಸ್ಸೈ, ಕಂಟ್ರಾಕ್ಟರ್ ಗುಂಡಿಟ್ಟು ಹತ್ಯೆ
ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಘಟನೆಯಲ್ಲಿ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ಮತ್ತು ಕಾಂಟ್ರಾ ಕ್ಟರ್ ಒಬ್ಬರನ್ನು ಗುಂಡು...

ಹಾಜಿಪುರ/ನವದೆಹಲಿ: ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಘಟನೆಯಲ್ಲಿ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ಮತ್ತು ಕಾಂಟ್ರಾ ಕ್ಟರ್ ಒಬ್ಬರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಇದರಿಂದ ಕ್ರುದ್ಧಗೊಂಡಿರುವ ಕೇಂದ್ರ ಸಚಿವ ಮತ್ತು ಹಾಜಿಪುರ ಸಂಸದ ರಾಮ್ವಿ ಲಾಸ್ ಪಾಸ್ವಾನ್ ಬಿಹಾರದಲ್ಲಿ ಜಂಗಲ್ ರಾಜ್ ಮತ್ತೆ ಕಾಲಿರಿಸಿದೆ ಎಂದು ಟೀಕಿಸಿದ್ದಾರೆ. ಅಪರಿ ಚಿತರು ಎಎಸ್‍ಐಯನ್ನು ಹತ್ಯೆ ಮಾಡಿದ್ದಾರೆ. ಆದರೆ ಕಾರಣ ಗೊತ್ತಾಗಿಲ್ಲ ಎಂದು ವೈಶಾಲಿ ಜಿಲ್ಲಾ ಎಸ್ಪಿ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ಪ್ರಕಾರ ದೇಹದಲ್ಲಿ ನಾಲ್ಕು ಗುಂಡು ತಗಲಿವೆ. ಮತ್ತೊಂದು ಘಟನೆಯಲ್ಲಿ ಕಾಂಟ್ರಾಕ್ಟರ್ ಒಬ್ಬರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಈ ಕೃತ್ಯಕ್ಕೂ ಕಾರಣ ತಿಳಿದುಬಂದಿಲ್ಲ ಎಂದಿದ್ದಾರೆ ಪೊಲೀಸರು. ಮತ್ತೊಂದೆಡೆ ಹಾಜಿಪುರದಲ್ಲಿ ವೈದ್ಯರೊ ಬ್ಬರ ಮನೆಯಲ್ಲಿ 12 ಸುತ್ತುಗಳಷ್ಟು ಗುಂಡು ಹಾರಾಟ ನಡೆಸಲಾಗಿದೆ. ಈ ಘಟನೆಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ 'ಬಿಹಾರದಲ್ಲಿ ಜಂಗಲ್ ರಾಜ್ ಹಿಂತಿರುಗಿದೆ. ಈ ಬಗ್ಗೆ ಮುಖ್ಯಮಂತ್ರಿ ನಿತೀಶ್ಕುಮಾರ್ ಅಸಹಾಯಕರಾಗಿದ್ದಾರೆ. ವೈಶಾಲಿ ಜಿಲ್ಲೆಯಿಂದ ಡಿಸಿಎಂ ಸೇರಿದಂತೆ ಮೂವರು ಸಚಿವರು ಸಂಪುಟದಲ್ಲಿದ್ದಾರೆ. ಹೀಗಿದ್ದರೂ ಇಂಥ ಘಟನೆಗಳು ನಡೆಯುತ್ತಿವೆ'' ಟೀಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


