ಜ.26 ರಂದು ಮದರಸಾಗಳಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡಲು ಮುಸ್ಲಿಂ ರಾಷ್ಟ್ರೀಯ ಮಂಚ್ ಕರೆ
ಜ.26 , ಗಣರಾಜ್ಯೋತ್ಸವ ದಿನದಂದು ಮದರಸಾಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಆರ್ ಎಸ್ಎಸ್ ನ ಮುಸ್ಲಿಂ ರಾಷ್ಟ್ರೀಯ ಮಂಚ್ ಕರೆ ನೀಡಿದೆ.

ನವದೆಹಲಿ: ಜ.26, ಗಣರಾಜ್ಯೋತ್ಸವ ದಿನದಂದು ಮದರಸಾಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಆರ್ ಎಸ್ಎಸ್ ನ ಮುಸ್ಲಿಂ ರಾಷ್ಟ್ರೀಯ ಮಂಚ್ ಕರೆ ನೀಡಿದೆ.
ಖಾಸಗಿ ಪತ್ರಿಯೊಂದರ ವರದಿ ಪ್ರಕಾರ, 26 ರಂದು ಮದರಸಾಗಳಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಲು ಕರೆ ನೀಡಿ ಆರ್ ಎಸ್ ಎಸ್ ನ ಮುಸ್ಲಿಂ ರಾಷ್ಟ್ರೀಯ ಮಂಚ್ ರಾಷ್ಟ್ರವ್ಯಾಪಿ ಅಭಿಯಾನ ಕೈಗೊಳ್ಳಲು ನಿರ್ಧರಿಸಿದ್ದು ಝಂಡಾ ಫಲಾನಿ ಅಭಿಯಾನವನ್ನು ರಾಷ್ಟ್ರವ್ಯಾಪಿ ನಡೆಸಲಿದೆ ಎಂದು ಉತ್ತರ ಪ್ರದೇಶದ ಎಂಆರ್ ಎಂ ನ ಸಂಯೋಜಕ ಮೆರಜಿಧ್ವಜ್ ಸಿಂಗ್ ಹೇಳಿದ್ದಾರೆ.
ಆದರೆ ಆರ್ ಎಸ್ ಎಸ್ ನ ಸಹ ಸಂಘಟನೆ ನೀಡಿರುವ ಕರೆಗೆ ವಿರೋಧ ವ್ಯಕ್ತಪಡಿಸಿರುವ ಕೆಲವು ಮುಸ್ಲಿಂ ಸಂಘಟನೆ ಮುಖಂಡರು, ಗಣರಾಜ್ಯೋತ್ಸವದಂದು ಆರ್ ಎಸ್ ಎಸ್ ತನ್ನ ಕಚೇರಿಗಳಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡುತ್ತದೆಯೇ? ಆರ್ ಎಸ್ಎಸ್ ನ ಮೂಲ ಸಿದ್ಧಾಂತ ರಾಷ್ಟ್ರಗೀತೆಯಲ್ಲಿ ನಂದಿಕೆ ಇಟ್ಟಿದೆಯೇ ಎಂದು ಪ್ರಶ್ನಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


