ದೆಹಲಿಯಲ್ಲಿ ನಡೆಯುವ ಎಲ್ಲಾ ಅಪರಾಧ ಪ್ರಕರಣಗಳಿಗೂ ಮೋದಿಯೇ ಹೊಣೆ: ಅಲಕಾ ಲಂಬಾ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುವ ಎಲ್ಲಾ ಅಪರಾಧ ಪ್ರಕರಣಗಳಿಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯೇ ಕಾರಣ ಎಂದು ಎಎಪಿ ನಾಯಕಿ ಅಲಕಾ ಲಂಬಾ ....

ಸಾಗರ್: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುವ ಎಲ್ಲಾ ಅಪರಾಧ ಪ್ರಕರಣಗಳಿಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯೇ ಕಾರಣ ಎಂದು ಎಎಪಿ ನಾಯಕಿ ಅಲಕಾ ಲಂಬಾ ಆರೋಪಿಸಿದ್ದಾರೆ.
ಪ್ರತಿಭಟನಾ ರ್ಯಾಲಿಯಲ್ಲಿ ಮಾತನಾಡಿದ ಅವರು ರಾಷ್ಟ್ರೀಯ ಅಪರಾಧ ದಳದ ದಾಖಲೆಗಳ ಪ್ರಕಾರ, ದೇಶದಲ್ಲಿ ಮಹಿಳೆಯರ ವಿರುದ್ಧ ದೇಶದಲ್ಲಿ ಅತಿ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗುತ್ತಿರುವುದು ಮಧ್ಯ ಪ್ರದೇಶದಲ್ಲಿ ಎಂದು ಹೇಳಿದರು. ಮಧ್ಯ ಪ್ರದೇಶದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳಿಗೆ ಸಿಎಂ ಶಿವರಾಜ್ ಚೌಹಾಣ್ ಹೊಣೆ ಎಂದು ಹೇಳಿದ್ದಾರೆ.
ದೆಹಲಿ ಪೊಲೀಸರು ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಾರೆ, ಒಂದು ವೇಳೆ ದೆಹಲಿ ಪೊಲೀಸ್ ಇಲಾಖೆ ಎಎಪಿ ಸರ್ಕಾರದ ಅಡಿಯಲ್ಲಿ ಕೆಲಸ ಮಾಡಿದರೇ, ದೆಹಲಿಯ ಸ್ಥಿತಿಯೇ ಬದಲಾಗುತ್ತದೆ ಎಂದು ಅವರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಇನ್ನೂ ಮಧ್ಯಪ್ರದೇಶದಲ್ಲಿ ನಡೆದ ವ್ಯಾಪಂ ಹಗರಣದಲ್ಲಿ ಹಲವಾರು ಮಂದಿ ನಿಗೂಢವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಶಿವರಾಜ್ ಚೌಹಾಣ್ ಅವರನ್ನು ತರಾಟೆಗೆ ತೆಗೆದುಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


