ಉಗ್ರರ ಭಯ: 3 ತಾಸು ಮುನ್ನ ಏರ್ ಪೋರ್ಟ್ ತಲುಪಲು ಪ್ರಯಾಣಿಕರಿಗೆ ಏರ್ ಇಂಡಿಯಾ ಸೂಚನೆ
ಭದ್ರತಾ ಮುನ್ನೆಚ್ಚರಿಕೆಯ ಕ್ರಮವಾಗಿ ಏರ್ ಇಂಡಿಯಾ ವಿಮಾನ ಸಂಸ್ಥೆ ತನ್ನ ಪ್ರಯಾಣಿಕರಿಗೆ ಮೂರು ಗಂಟೆ ಮೊದಲೇ ವಿಮಾನ ನಿಲ್ದಾಣ ತಲುಪುವಂತೆ ಮನವಿ ಮಾಡಿದೆ....

ನವದೆಹಲಿ: ಪಠಾಣ್‌ಕೋಟ್ ವಾಯುನೆಲೆ ಮೇಲಿನ ಪಾಕ್ ಉಗ್ರರ ದಾಳಿ ಹಿನ್ನೆಲೆಯಲ್ಲಿ ದೇಶಾದ್ಯಂತ ನೀಡಲಾಗಿರುವ ಭದ್ರತಾ ಮುನ್ನೆಚ್ಚರಿಕೆಯ ಕ್ರಮವಾಗಿ ಏರ್ ಇಂಡಿಯಾ ವಿಮಾನ ಸಂಸ್ಥೆ ತನ್ನ ಪ್ರಯಾಣಿಕರಿಗೆ ಮೂರು ಗಂಟೆ ಮೊದಲೇ ವಿಮಾನ ನಿಲ್ದಾಣ ತಲುಪುವಂತೆ ಮನವಿ ಮಾಡಿದೆ.
ಭದ್ರತಾ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಪ್ರಯಾಣಿಕರನ್ನು ಹಾಗೂ ಅವರ ಸರಕು ಸರಂಜಾಮುಗಳನ್ನು ಕೂಲಂಕುಷ ಪರೀಕ್ಷೆಗೊಳಪಡಿಸುವುದು ಅಗತ್ಯವಾಗಿದೆ. ಇದಕ್ಕೆ ಸಾಕಷ್ಟು ಸಮಯ ಬೇಕಾಗಿರುವುದರಿಂದ ಪ್ರಯಾಣಿಕರು ತಮ್ಮ ನಿಗದಿತ ವಿಮಾನ ಹಾರಾಟ ವೇಳೆಗೆ ಮೂರು ತಾಸು ಮೊದಲೇ ವಿಮಾನ ನಿಲ್ದಾಣವನ್ನು ತಲುಪಿ ಭದ್ರತಾ ಪ್ರಕ್ರಿಯೆಗಳಿಗೆ ಒಳಪಡಬೇಕು ಮತ್ತು ಆ ಮೂಲಕ ಯಾವುದೇ ಅನಾನುಕೂಲತೆ ಉಂಟಾಗುವುದನ್ನು ತಪ್ಪಿಸಬೇಕು ಎಂದು ಏರ್ ಇಂಡಿಯಾ ತನ್ನ ಪ್ರಯಾಣಿಕರಿಗೆ ತಿಳಿಸಿದೆ.
ತನ್ನ ಪ್ರಯಾಣಿಕರ ಸುರಕ್ಷೆ ಮತ್ತು ಭದ್ರತೆಗೆ ಗರಿಷ್ಠ ಆದ್ಯತೆ ನೀಡುವುದರಿಂದ ಇದಕ್ಕೆ ಅನುಗುಣವಾಗಿ ಪ್ರಯಾಣಿಕರು ಸಹಕರಿಸಬೇಕು ಎಂದು ಅದು ಕೋರಿದೆ ಇದುವರೆಗಿನ ನಿಯಮಗಳ ಪ್ರಕಾರ ಏರಿಂಡಿಯಾ ವಿಮಾನ ಪ್ರಯಾಣಿಕರು ನಿಗದಿತ ವಿಮಾನ ಹಾರಾಟ ವೇಳೆಗೆ ಒಂದು ಗಂಟೆ ಮುಂಚಿತವಾಗಿ ವಿಮಾನ ನಿಲ್ದಾಣವನ್ನು ತಲುಪುವುದು ಕಡ್ಡಾಯವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


