ರಕ್ಷಣಾ ಖರೀದಿಯಲ್ಲಿ ಬದಲಾವಣೆ
ದೇಶದ ರಕ್ಷಣಾ ಸಾಮಗ್ರಿ ಖರೀದಿಗೆ ಸಂಬಂಧಪಟ್ಟಂತೆ ಮಹತ್ವದ ಬದಲಾವಣೆಗೆ ಕಾರಣವಾಗುವ ಹೊಸ ನಿಯಮಕ್ಕೆ...

Published On :
ನವದೆಹಲಿ: ದೇಶದ ರಕ್ಷಣಾ ಸಾಮಗ್ರಿ ಖರೀದಿಗೆ ಸಂಬಂಧಪಟ್ಟಂತೆ ಮಹತ್ವದ ಬದಲಾವಣೆಗೆ ಕಾರಣವಾಗುವ ಹೊಸ ನಿಯಮಕ್ಕೆ ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ಸಹಿ ಹಾಕಿದ್ದು, ಇನ್ನು ದೇಶಿ ಉತ್ಪಾದಕರಿಗೆ ಖರೀದಿಯಲ್ಲಿ ಆದ್ಯತೆ ನೀಡಲಾಗುವುದು.
ಪ್ರಧಾನಿ ಮೋದಿಯವರ ಮೇಕ್ ಇನ್ ಇಂಡಿಯಾ ಯೋಜನೆಗೆ ಪೂರಕವಾಗಿ ರಕ್ಷಣಾ ಸಚಿವಾಲಯ ಈ ನಿಯಮ ಜಾರಿಗೆ ತರಲಿದ್ದು, ಶೇ.40ರಷ್ಟು ಭಾರತೀಯ ಬಿಡಿಭಾಗಗಳನ್ನು ಒಳಗೊಂಡ ದೇಶೀಯವಾಗಿ ಅಭಿವೃದ್ಧಿಪಡಿಸಿದ ಮತ್ತು ಉತ್ಪಾದಿಸಿದ ರಕ್ಷಣಾ ಸಾಮಗ್ರಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು.
ದೇಶೀ ರಕ್ಷಣಾ ಸಾಮಗ್ರಿಗಳ ಗುಣಮಟ್ಟ, ವಿನ್ಯಾಸಗಳ ಆಧಾರದಲ್ಲಿ ಸಹಾಯಧನ, ಒಪ್ಪಂದಗಳ ಬಗ್ಗೆ ಉನ್ನತಾಧಿಕಾರ ಸಮಿತಿ ತೀರ್ಮಾನ ಕೈಗೊಳ್ಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


