ನ್ಯಾಷನಲ್ ಹೆರಾಲ್ಡ್ ಪ್ರಕರಣ: ಪುಕ್ಕಟೆ ವಕಾಲತ್ತು ವಹಿಸುವುದಾಗಿ ಹೇಳಿದ ರಾಮ್ ಜೇಠ್ಮಲಾನಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್ ಗಾಂಧಿಗೆ ಕಾನೂನು ನೆರವು ನೀಡುವುದಾಗಿ ...

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್ ಗಾಂಧಿಗೆ ಕಾನೂನು ನೆರವು ನೀಡುವುದಾಗಿ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಹೇಳಿದ್ದಾರೆ.
ಈ ಸಂಬಂಧ ಡಿಸೆಂಬರ್ 11 ರಂದು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವ ಜೇಠ್ಮಲಾನಿ, ನಿಮ್ಮ ಪಕ್ಷದಲ್ಲಿ ದೊಡ್ಡ ದೊಡ್ಡ ವಕೀಲರಿದ್ದಾರೆ ಎಂಬುದು ನನಗೆ ಗೊತ್ತು. ಆದರೂ ನಿಮಗೆ ಅವಶ್ಯಕತೆ ಕಂಡು ಬಂದಲ್ಲಿ, ನೀವು ಬಯಸಿದ್ದಲ್ಲಿ ನಾನು ನಿಮಗೆ ಸಹಾಯ ಮಾಡುತ್ತೇನೆ ಎಂದು ಹೇಳಿದ್ದಾರೆ.
ಇನ್ನೂ ತಾವು ಉಚಿತವಾಗಿ ವಕಾಲತ್ತು ವಹಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ನೆರವು ಹಾಗೂ ನ್ಯಾಯಾಲಯದಲ್ಲಿ ವಾದಿಸುವುದಾಗಿ ಜೇಠ್ಮಲಾನಿ ಹೇಳಿದ್ದಾರೆ. ಆದರೆ ಈ ಸಂಬಂಧ ಸೋನಿಯಾ ಗಾಂಧಿ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


