ದೇಶ

ಡಾರ್ಜಿಲಿಂಗ್​ನಲ್ಲಿ ಭೂ ಕುಸಿತ: ಮಗು ಸೇರಿ 2 ಸಾವು

ಡಾರ್ಜಿಲಿಂಗ್​ನಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಮಗು ಸೇರಿದಂತೆ ಇಬ್ಬರು ಮೃತಪಟ್ಟಿದ್ದು ಐವರು ಗಾಯಗೊಂಡಿದ್ದಾರೆ...

ಡಾರ್ಜಿಲಿಂಗ್​ನಲ್ಲಿ ಭೂ ಕುಸಿತ: ಮಗು ಸೇರಿ 2 ಸಾವು
ಭೂ ಕುಸಿತ(ಸಂಗ್ರಹ ಚಿತ್ರ)
Published On :

ಡಾರ್ಜಿಲಿಂಗ್: ಡಾರ್ಜಿಲಿಂಗ್​ನಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಮಗು ಸೇರಿದಂತೆ ಇಬ್ಬರು ಮೃತಪಟ್ಟಿದ್ದು ಐವರು ಗಾಯಗೊಂಡಿದ್ದಾರೆ.

ಡಾರ್ಜಿಲಿಂಗ್ ಜಿಲ್ಲೆಯ ಬೆಟ್ಟದ ತಪ್ಪಲ ಪ್ರದೇಶದ ಬೊಟಭೀರ್​ನಲ್ಲಿ ಇಂದು ಬೆಳಗ್ಗೆ 5:30ರ ಸುಮಾರಿಗೆ ಭೂಕುಸಿತ ಸಂಭವಿಸಿದ್ದು, ಇದರಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುರಾಗ್ ಶ್ರೀವಾಸ್ತವ್ ತಿಳಿಸಿದ್ದಾರೆ.

ಸಿಕ್ಕಿಂ ಗಡಿಗೆ ಸಮೀಪ ಈ ದುರಂತ ಸಂಭವಿಸಿದ್ದು ಅವಶೇಷಗಳ ಅಡಿ ಸಿಲುಕಿದ್ದ ದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅವರು ತಿಳಿಸಿದರು.

ಐಒಸಿ ಉದ್ಯೋಗಿ ನಿಮಾ ತಮಾಂಗ್ ಕುಟುಂಬದವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳೀಯರ ನೆರವಿನೊಂದಿಗೆ ಪಶ್ಚಿಮ ಬಂಗಾಳ ಮತ್ತು ಸಿಕ್ಕಿ ಪೊಲೀಸರು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.