ದೇಶ

ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣ: ವರದಿ ಪಡೆದ ದೆಹಲಿ ಪೊಲೀಸರು

ದೇಶದಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಏಮ್ಸ್ ವೈದ್ಯರಿಂದ ದೆಹಲಿ ಪೊಲೀಸರು ಅಂತಿಮ ವರದಿಯನ್ನು ಪಡೆದಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ...

ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣ: ವರದಿ ಪಡೆದ ದೆಹಲಿ ಪೊಲೀಸರು
ಸುನಂದಾ ಪುಷ್ಕರ್
Published On :

ನವದೆಹಲಿ: ದೇಶದಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಏಮ್ಸ್ ವೈದ್ಯರಿಂದ ದೆಹಲಿ ಪೊಲೀಸರು ಅಂತಿಮ ವರದಿಯನ್ನು ಪಡೆದಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

ವರದಿ ಪಡೆದಿರುವ ಕುರಿತಂತೆ ಪ್ರತಿಕ್ರಿಯೆ ನೀಡಿರುವ ದೆಹಲಿ ಪೊಲೀಸ್ ವರಿಷ್ಠಾಧಿಕಾರಿ ಬಸ್ಸಿ ಅವರು, ಸುನಂದಾ ಪುಷ್ಕರ್ ನಿಗೂಢ ಸಾವು ಕುರಿತಂತೆ ಏಮ್ಸ್ ವೈದ್ಯರು ಅಂತಿಮ ವರದಿಯೊಂದನ್ನು ಸಲ್ಲಿಸಿದ್ದು, ವರದಿಯಲ್ಲಿನ ನಿಖರ ಮಾಹಿತಿಗಳನ್ನು ವಿಶೇಷ ಪೊಲೀಸ್ ಆಯುಕ್ತರಾದ ದೀಪಕ್ ಮಿಶ್ರಾ ಅವರು ಬಹಿರಂಗ ಪಡಿಸಲಿದ್ದಾರೆಂದು ಹೇಳಿದ್ದಾರೆ.

ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರು ದೆಹಲಿಯ ಚಾಣಕ್ಯಪುರಿಯ ಲೀಲಾ ಪ್ಯಾಲೆಸ್ ಪಂಚತಾರಾ ಹೋಟೆಲ್‌ನ ರೂಮ್ ನಂ.345ರಲ್ಲಿ ಜನವರಿ 17ರ ರಾತ್ರಿ ನಿಗೂಢವಾಗಿ ಸಾವನ್ನಪ್ಪಿದ್ದರು. ಈ ಸಾವು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿತ್ತು.

2014ರ ಜನವರಿ 17 ರಂದು ದೆಹಲಿಯ ಪಂಚತಾರಾ ಹೋಟೆಲ್ ನಲ್ಲಿ ಸುನಂದಾ ಪುಷ್ಕರ್ ಅವರ ಮೃತ ದೇಹ ಪತ್ತೆಯಾಗಿತ್ತು. ಈ ಸಾವು ಸಾಕಷ್ಟು ಅನುಮಾನಕ್ಕೆ ದಾರಿ ಮಾಡಿಕೊಟ್ಟಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.