ಮಾಲ್ಡಾ ಹಿಂಸಾಚಾರ: ರಾಷ್ಟ್ರಪತಿ ಭೇಟಿ ಮಾಡಲಿರುವ ಬಿಜೆಪಿ ನಿಯೋಗ
ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ನಡೆದ ಹಿಂಸಾಚಾರ ಕುರಿತಂತೆ ಇಂದು ಬಿಜೆಪಿ ನಿಯೋಗ ರಾಷ್ಟಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಮಾಡಲಿದೆ...

ನವದೆಹಲಿ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ನಡೆದ ಹಿಂಸಾಚಾರ ಕುರಿತಂತೆ ಇಂದು ಬಿಜೆಪಿ ನಿಯೋಗ ರಾಷ್ಟಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಮಾಡಲಿದೆ.
ಬಿಜೆಪಿ ಮುಖಂಡರಾದ ಸಿದ್ದಾರ್ಥ್ ನಾಥ್, ಕೈಲಾಶ್ ವಿಜಯ ವರ್ಗೀಯ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಜನವರಿ ತಿಂಗಳ ಆರಂಭದಲ್ಲಿ ಮಾಲ್ಡಾದಲ್ಲಿ ಪೊಲೀಸ್ ಠಾಣೆಗೆ ಕೆಲವು ಗಲಭೆ ಕೋರರು ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದರು. ಈ ಸಂಬಂಧ ರಾಜ್ಯಪಾಲರಿಗೂ ಈಗಾಗಲೇ ಬಿಜೆಪಿ ವರದಿ ಸಲ್ಲಿಸಿದೆ.
ಈ ಸಂಬಂಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಕರಣದ ಬಗ್ಗೆ ತನಿಖೆ ನಡೆಸಲು ತಂಡವನ್ನು ರಚಿಸಿದ್ದಾರೆ. ಇನ್ನೂ ಕೇಂದ್ರ ಸರ್ಕಾರವೂ ಕೂಡ ಪ್ರಕರಣ ಸಂಬಂಧ ತನಿಖೆ ನಡೆಸಲು ತಂಡವನ್ನು ಕಳುಹಿಸಲಿದೆ ಎಂದು ಮೂಲಗಳು ತಿಳಿಸಿವೆ.
ಇನ್ನೂ ಘಟನೆ ಸಂಬಂಧ ಬಿಜೆಪಿ ಮತ್ತು ಆರ್ ಎಸ್ ಎಸ್ ಸಂಘಟನೆಗಳು ಸಮಾಲೋಚನೆ ನಡೆಸಿ ಭವಿಷ್ಯದಲ್ಲಿ ಇಂತ ಘಟನೆಗಳು ಸಂಭವಿಸಿದಂತೆ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ಚರ್ಚಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


