ರಾಷ್ಟ್ರಪತಿ ಆಳ್ವಿಕೆ ಹೇರಲು ಒತ್ತಡವಿತ್ತು: ಭಾರದ್ವಾಜ್
ಬಿಹಾರದಲ್ಲಿ 2005ರಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ-ಜೆಡಿಯು ಮೈತ್ರಿಕೂಟ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರುವ ಬಗ್ಗೆ ಸುಪ್ರೀಂಕೋರ್ಟಿಂದ ಅನುಮೋದನೆ ಪಡೆದುಕೊಳ್ಳಬೇಕು...

ನವದೆಹಲಿ: ಬಿಹಾರದಲ್ಲಿ 2005ರಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ-ಜೆಡಿಯು ಮೈತ್ರಿಕೂಟ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರುವ ಬಗ್ಗೆ ಸುಪ್ರೀಂಕೋರ್ಟಿಂದ ಅನುಮೋದನೆ ಪಡೆದುಕೊಳ್ಳಬೇಕು. ಇಲ್ಲದಿದ್ದರೆ ತಾವು ಕಾನೂನು ಸಚಿವ ಸ್ಥಾನ ಕಳೆದುಕೊಳ್ಳುವ ಭೇಟಿ ಎದುರಾಗಿತ್ತು ಎಂದು ಕೇಂದ್ರದ ಮಾಜಿ ಸಚಿವ ಎಚ್.ಆರ್.ಭಾರದ್ವಾಜ್ ಹೇಳಿದ್ದಾರೆ.
ಈ ಬಗ್ಗೆ ಶುಕ್ರವಾರ `ಟೈಮ್ಸ್ ಆಫ್ ಇಂಡಿಯಾ' ವರದಿ ಮಾಡಿದೆ. ಈ ನಿಟ್ಟಿನಲ್ಲಿ ಸುಪ್ರೀಂಕೋರ್ಟ್‍ನ ಅಂದಿನ ಮುಖ್ಯ ನ್ಯಾಯಮೂರ್ತಿ ವೈ.ಕೆ.ಸಭರ್‍ವಾಲ್ ಜತೆ ಭೇಟಿಯಾಗಿದ್ದೆ. ಈ ಮೂಲಕ ಸರ್ಕಾರದ ತೀರ್ಮಾನ ಎತ್ತಿಹಿಡಿ ಯುವ ಬಗ್ಗೆ ಚರ್ಚಿಸಲು ಮುಂದಾಗಿದ್ದೆ. ಆದರೆ ಅದನ್ನು ಚರ್ಚಿಸಲು ಸಾಧ್ಯವಾಗದೆ ಹಿಂತಿರುಗಿದ್ದೆ ಎಂದು ಭಾರದ್ವಾಜ್ ತಿಳಿಸಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಅವರು ಈ ಮಾಹಿತಿ ನೀಡಿದ್ದಾರೆ. ಆದರೆ, ಕಾಂಗ್ರೆಸ್ ಭಾರದ್ವಾಜ್ ಹೇಳಿಕೆಯನ್ನು ತಿರಸ್ಕರಿಸಿದೆ. ಯುಪಿಎ ಸರ್ಕಾರದ ಯಾವುದೇ ಸಚಿವರು ನ್ಯಾಯಾಂಗದ ಮೇಲೆ ಒತ್ತಡ ಹೇರಲು ಮುಂದಾಗಿರಲಿಲ್ಲ ಎಂದು ಪಕ್ಷದ ನಾಯಕ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ. ಭಾರದ್ವಾಜ್ ಹೇಳಿಕೆಯಿಂದ ಕಾಂಗ್ರೆಸ್ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಗೌರವಿಸುವುದಿಲ್ಲ ಎನ್ನುವುದು ಸಾಬೀತಾಗಿದೆ ಎಂದು ಬಿಜೆಪಿ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


