ರೋಹಿತ್ ಅವರದ್ದು ಆತ್ಮಹತ್ಯೆಯಲ್ಲ, ಪ್ರಜಾಪ್ರಭುತ್ವದ ಕೊಲೆ: ಕೇಜ್ರಿವಾಲ್
ಹೈದ್ರಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ನಿಲಯಿಂದ ಉಚ್ಛಾಟಿತನಾಗಿ ಸೋಮವಾರ ಆತ್ಮಹತ್ಯೆಗೆ ಶರಣಾದ ಸಂಶೋಧನಾ ವಿದ್ಯಾರ್ಥಿ ರೋಹಿತ್ ...

Published On :
ನವದೆಹಲಿ: ಹೈದ್ರಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ನಿಲಯಿಂದ ಉಚ್ಛಾಟಿತನಾಗಿ ಸೋಮವಾರ ಆತ್ಮಹತ್ಯೆಗೆ ಶರಣಾದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಅವರದ್ದು ಆತ್ಮಹತ್ಯೆಯಲ್ಲ, ಕೊಲೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಮಂಗಳವಾರ ಬೆಳಗ್ಗೆ ಟ್ವೀಟ್ ಮಾಡಿರುವ ಕೇಜ್ರಿವಾಲ್, ಮೋದಿ ಸರ್ಕಾರ ದಲಿತರನ್ನು ಉದ್ಧಾರ ಮಾಡಬೇಕಿದೆ. ಇದರ ಬದಲು ಮೋದಿಯವರ ಸಚಿವರ ಐವರು ದಲಿತ ವಿದ್ಯಾರ್ಥಿಗಳನ್ನು ಉಚ್ಛಾಟನೆ ಮಾಡಿ ವಜಾಗೊಳಿಸಿದ್ದಾರೆ.
ಇದೊಂದು ಆತ್ಮಹತ್ಯೆ ಇಲ್ಲ. ಇದು ಕೊಲೆ. ಇದು ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಹತ್ಯೆಯಾಗಿದೆ. ಈ ಪ್ರಕರಣಕ್ಕೆ ಕಾರಣರಾದ ಸಚಿವರನ್ನು ಮೋದಿಯವರು ವಜಾಗೈಯ್ಯಬೇಕು ಮತ್ತು ದೇಶದ ಜನತೆಯಲ್ಲಿ ಕ್ಷಮೆಯಾಚಿಸಬೇಕು ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


