ದೇಶ

ರೋಹಿತ್ ವೇಮುಲ ಪ್ರಕರಣ: ಆಡಳಿತ ಮಂಡಳಿ ಸದಸ್ಯತ್ವಕ್ಕೆ 10 ಪ್ರೊಫೆಸರ್ ಗಳ ರಾಜೀನಾಮೆ

ಸಂಶೊಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ,ದಲಿತ ಸಮುದಾಯಕ್ಕೆ ಸೇರಿದ 10 ಪ್ರೊಫೆಸರ್​ಗಳು ವಿಶ್ವವಿದ್ಯಾಲಯದ...

ರೋಹಿತ್ ವೇಮುಲ ಪ್ರಕರಣ: ಆಡಳಿತ ಮಂಡಳಿ ಸದಸ್ಯತ್ವಕ್ಕೆ 10 ಪ್ರೊಫೆಸರ್ ಗಳ ರಾಜೀನಾಮೆ
ರೋಹಿತ್ ವೇಮುಲ
Published On :

ಹೈದರಾಬಾದ್: ಸಂಶೊಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ,ದಲಿತ ಸಮುದಾಯಕ್ಕೆ ಸೇರಿದ 10 ಪ್ರೊಫೆಸರ್​ಗಳು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯತ್ಯಕ್ಕೆ ರಾಜೀನಾಮೆ ನೀಡಿದ್ದಾರೆ.

ರೋಹಿತ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರತಿಭಟನೆಗಳು ಹೆಚ್ಚುತ್ತಿದ್ದು, ಪ್ರೊಫೆಸರ್​ಗಳು ಸಹ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಸತ್ಯವನ್ನು ಮರೆ ಮಾಚುತ್ತಿದ್ದಾರೆ ಎಂದು ಪ್ರೊಫೆಸರ್​ಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ವೇಮುಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮತಿ ಇರಾನಿ ಅವರು "ಸೃಷ್ಟಿ ಸಿರುವ ಹೇಳಿಕೆ'ಯನ್ನು ವಿರೋಧಿಸಿ ಈ ಪ್ರೊಫೆಸರ್‌ಗಳು ರಾಜೀನಾಮೆ ಮೂಲಕ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ.

ರೋಹಿತ್​ನನ್ನು ಅಮಾನತು ಮಾಡಿದ ಸಮಿತಿಯಲ್ಲಿ ದಲಿತ ಪ್ರೊಫೆಸರ್ ಸಹ ಇದ್ದರು ಎಂಬ ಸಚಿವರ ಹೇಳಿಕೆಯನ್ನು ವಿಶ್ವವಿದ್ಯಾಲಯದ ಎಸ್​ಸಿ/ಎಸ್​ಸಿ ಟೀಚರ್ಸ್ ಮತ್ತು ಆಫೀಸರ್ಸ್ ಫೋರಮ್ ನಿರಾಕರಿಸಿದೆ. ಮೇಲ್ವರ್ಗದ ಪ್ರೊಫೆಸರ್ ಒಬ್ಬರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಸಮಿತಿಯಲ್ಲಿ ದಲಿತರು ಯಾರೂ ಇರಲಿಲ್ಲ ಎಂದು ತಿಳಿಸಿದೆ.

ನಮ್ಮ ವಿದ್ಯಾರ್ಥಿಗಳ ವಿರುದ್ಧ ಹೂಡಲಾಗಿರುವ ಪೊಲೀಸ್‌ ಕೇಸುಗಳನ್ನು ಹಾಗೂ ವಿದ್ಯಾರ್ಥಿಗಳ ಮೇಲಿನ ಅಮಾನತು ಆದೇಶವನ್ನು ತತ್‌ಕ್ಷಣವೇ ಹಿಂಪಡೆಯಬೇಕೆಂದು ನಾವು ಆಗ್ರಹಿಸುತ್ತೇವೆ' ಎಂದು ಪ್ರೊಫೆಸರ್‌ಗಳು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.