ನಿತೀಶ್ ಕುಮಾರ್ ಸಲಹೆಗಾರರಾಗಿ ಪ್ರಶಾಂತ್ ಕಿಶೋರ್ ನೇಮಕ
2015 ರ ಬಿಹಾರ ಚುನಾವಣೆಯಲ್ಲಿ ಜೆಡಿಯು ಮೈತ್ರಿಕೂಟಕ್ಕೆ ದೂರೆತ ಗೆಲುವಿನ ರೂವಾರಿ ಎಂದೇ ಗುರುತಿಸಲಾದ ಪ್ರಶಾಂತ್ ಕಿಶೋರ್ ಗೆ ನಿತೀಶ್ ಕುಮಾರ್ ಸಂಪುಟ ದರ್ಜೆ ಸ್ಥಾನ ನೀಡಿದ್ದಾರೆ.

ಪಾಟ್ನಾ: 2015 ರ ಬಿಹಾರ ಚುನಾವಣೆಯಲ್ಲಿ ಜೆಡಿಯು ಮೈತ್ರಿಕೂಟಕ್ಕೆ ದೂರೆತ ಗೆಲುವಿನ ರೂವಾರಿ ಎಂದೇ ಗುರುತಿಸಲಾದ ಪ್ರಶಾಂತ್ ಕಿಶೋರ್ ಗೆ ನಿತೀಶ್ ಕುಮಾರ್ ಸಂಪುಟ ದರ್ಜೆ ಸ್ಥಾನ ನೀಡಿದ್ದಾರೆ.
ಪ್ರಶಾಂತ್ ಕಿಶೋರ್ ಅವರನ್ನು ಬಿಹಾರ ಮುಖ್ಯಮಂತ್ರಿ ಅವರ ಸಲಹೆಗಾರರಾಗಿ ನೇಮಕ ಮಾಡಿರುವುದರ ಬಗ್ಗೆ ಅಧಿಕೃತ ಆದೇಶ ಹೊರಬಿದ್ದಿದ್ದು, ಪ್ರಶಾಂತ್ ಕಿಶೋರ್ ಅವರಿಗೆ ಸಂಪುಟ ದರ್ಜೆ ಸ್ಥಾನ ನೀಡಲಾಗಿದೆ.
2014 ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರ ಯಶಸ್ಸಿಗೆ ಕಾರಣವಾಗಿದ್ದ ಪ್ರಶಾಂತ್ ಕಿಶೋರ್ 2015 ರ ಬಿಹಾರ ವಿಧಾನಸಭಾ ಚುನಾವಣೆ ವೇಳೆ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷಕ್ಕೆ ಪ್ರಚಾರ ಕಾರ್ಯತಂತ್ರ ರೂಪಿಸುವ ಜವಾಬ್ದಾರಿ ಹೊತ್ತಿದ್ದರು. ಪ್ರಶಾಂತ್ ಕಿಶೋರ್ ಅವರ ಕಾರ್ಯತಂತ್ರ ಯಶಸ್ವಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಮತ್ತೊಮ್ಮೆ ಅಧಿಕಾರ ಪಡೆಯಲು ಸಹಕಾರಿಯಾಗಿತ್ತು. ಪ್ರಶಾಂತ್ ಕಿಶೋರ್ ಬಿಹಾರದ ಬಕ್ಸರ್ ಮೂಲದವರಾಗಿದ್ದು ಯುಎನ್ ಆರೋಗ್ಯ ತಜ್ಞನ ಕೆಲಸಕ್ಕೆ 2011 ರಲ್ಲಿ ರಾಜೀನಾಮೆ ನೀಡಿ ಭಾರತಕ್ಕೆ ವಾಪಸ್ಸಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


