ಮಲಗಿದ್ದವರ ಮೇಲೆ ಹರಿದ ಕಾರು: ಐವರು ಗಾಯ; ಚಾಲಕನ ಬಂಧನ
ದಿನದ ವ್ಯವಹಾರ ಮುಗಿಸಿ ರಾತ್ರಿಯಾದ ಮೇಲೆ ರಸ್ತೆ ಬದಿ ಪಾದಚಾರಿ ಮಾರ್ಗದಲ್ಲಿ ಮಲಗಿದ್ದವರ ಮೇಲೆ ವೇಗವಾಗಿ ಕಾರು ಹರಿದು ಐವರು ಗಂಭೀರವಾಗಿ ಗಾಯಗೊಂಡಿರುವ...

ಮುಂಬೈ: ದಿನದ ವ್ಯವಹಾರ ಮುಗಿಸಿ ರಸ್ತೆ ಬದಿ ಪಾದಚಾರಿ ಮಾರ್ಗದಲ್ಲಿ ಮಲಗಿದ್ದವರ ಮೇಲೆ ವೇಗವಾಗಿ ಕಾರು ಹರಿದು ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಮುಂಬೈಯ ಮಸ್ಜ್ದೀದ್ ಬಂದರ್ ಮೊಹಮ್ಮದ್ ಆಲಿ ಬಳಿಯ ಕ್ರಾಫರ್ಡ್ ಮಾರುಕಟ್ಟೆ ಸಮೀಪ ಕಳೆದ ಮಧ್ಯರಾತ್ರಿ ನಡೆದಿದೆ.
ಮರ್ಸಿಡಿಸಿ ಬೆಂಜ್ ಕಾರು ವೇಗವಾಗಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ಟೊಯೊಟಾ ಕಾರಿಗೆ ಹೋಗಿ ಡಿಕ್ಕಿ ಹೊಡೆದಿದೆ. ನಂತರ ಪಾದಚಾರಿ ಮಾರ್ಗದಲ್ಲಿ ಮಲಗಿದ್ದವರ ಮೇಲೆ ಕಾರು ಹರಿದಿದೆ. ಗಾಯಗೊಂಡವರು ನಾಲ್ವರು ಮಹಿಳೆಯರು ಮತ್ತು ಒಂದು ಮಗು ಆಗಿದೆ. ಕಾರು ಮುಂಬೈ ಮಹಾನಗರ ಪಾಲಿಕೆ ಗುತ್ತಿಗೆದಾರ ಅಮೀನ್ ಯೂಸಫ್ ಖಾನ್ ಗೆ ಸೇರಿದ್ದಾಗಿದೆ. ಚಾಲಕ ಮದ್ಯಪಾನ ಮಾಡಿರಬಹುದು ಎಂದು ಶಂಕಿಸಲಾಗಿದೆ. ಘಟನೆ ನಡೆದ ಕೂಡಲೇ ಕಾರು ಚಾಲಕ ಅಲ್ಲಿಂದ ಪರಾರಿಯಾಗಿದ್ದಾರೆ.
''ತನಿಖೆ ನಡೆಸುತ್ತಿದ್ದೇವೆ. ಕಾರಿನ ಒಳಗೆ ಎಷ್ಟು ಜನರಿದ್ದರು ಎಂಬ ಬಗ್ಗೆ ನಿಖರ ಮಾಹಿತಿಯಿಲ್ಲ. ಸಂಪೂರ್ಣ ತನಿಖೆ ನಡೆಸಿದ ನಂತರವಷ್ಟೇ ಘಟನೆ ಬಗ್ಗೆ ನಿಖರ ಮಾಹಿತಿ ತಿಳಿದುಬರಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಶೋಕ್ ದುದ್ಹೆ ತಿಳಿಸಿದ್ದಾರೆ.ಗಾಯಗೊಂಡವರಿಗೆ ಜೆಜೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಚಾಲಕ ಬಂಧನ: ಎಎನ್ ಐ ಸುದ್ದಿಸಂಸ್ಥೆಗೆ ಸಿಕ್ಕಿದ ಮಾಹಿತಿ ಪ್ರಕಾರ, ಕಾರಿನ ಚಾಲಕನನ್ನು ಪೊಲೀಸರು ಬಂಧಿಸಿದ್ದು, ಪಿದೋನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


