ದೇಶ

ಆಲ್ಪ್ರಾಕ್ಸ್ ಓವರ್ ಡೋಸ್ ನಿಂದಾಗಿ ಸುನಂದಾ ಪುಷ್ಕರ್ ಸಾವು

ದೇಶದಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಸುನಂದಾ ಪುಷ್ಕರ್ ಸಾವಿನ ರಹಸ್ಯ ಬಹಿರಂಗವಾಗಿದ್ದು, ವಿಷ ಪ್ರಾಶನದಿಂದ ಪುಷ್ಕರ್ ಮೃತಪಟ್ಟಿದ್ದಾರೆ ಎಂದು ಏಮ್ಸ್...

ಆಲ್ಪ್ರಾಕ್ಸ್ ಓವರ್ ಡೋಸ್ ನಿಂದಾಗಿ ಸುನಂದಾ ಪುಷ್ಕರ್ ಸಾವು
ಸುನಂದಾ ಪುಷ್ಕರ್
Published On :

ನವದೆಹಲಿ: ದೇಶದಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಸುನಂದಾ ಪುಷ್ಕರ್ ಸಾವಿನ ರಹಸ್ಯ ಬಹಿರಂಗವಾಗಿದ್ದು, ವಿಷ ಪ್ರಾಶನದಿಂದ ಪುಷ್ಕರ್ ಮೃತಪಟ್ಟಿದ್ದಾರೆ ಎಂದು ಏಮ್ಸ್ ವೈದ್ಯರು ವರದಿ ನೀಡಿದ್ದಾರೆ.

ಆಲ್ರ್ಪಾಕ್ಸ್ ಓವರ್ ಡೋಸ್ ನಿಂದಾಗಿ ಸುನಂದಾ ಪುಷ್ಕರ್ ಸಾವನ್ನಪ್ಪಿದ್ದಾರೆ ಎಂದು ಏಮ್ಯ್ ವೈದ್ಯರು ಸರ್ವಾನುಮತದಿಂದ ನಿರ್ಧಾರಕ್ಕೆ ಬಂದಿದ್ದಾರೆ. ಎಫ್ ಬಿಐ ವರದಿ ಆಧಾರಿಸಿ ಈ ವರದಿಯನ್ನು ವೈದ್ಯರು ತಯಾರಿಸಿದ್ದಾರೆ.

ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರು ದೆಹಲಿಯ ಚಾಣಕ್ಯಪುರಿಯ ಲೀಲಾ ಪ್ಯಾಲೆಸ್ ಪಂಚತಾರಾ ಹೋಟೆಲ್‌ನ ರೂಮ್ ನಂ.345ರಲ್ಲಿ ಜನವರಿ 17ರ ರಾತ್ರಿ ನಿಗೂಢವಾಗಿ ಸಾವನ್ನಪ್ಪಿದ್ದರು. ಈ ಸಾವು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿತ್ತು.

2014ರ ಜನವರಿ 17 ರಂದು ದೆಹಲಿಯ ಪಂಚತಾರಾ ಹೋಟೆಲ್ ನಲ್ಲಿ ಸುನಂದಾ ಪುಷ್ಕರ್ ಅವರ ಮೃತ ದೇಹ ಪತ್ತೆಯಾಗಿತ್ತು. ಈ ಸಾವು ಸಾಕಷ್ಟು ಅನುಮಾನಕ್ಕೆ ದಾರಿ ಮಾಡಿಕೊಟ್ಟಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.