ಪಠಾಣ್ ಕೋಟ್ ದಾಳಿ: ಸಲ್ವಿಂದರ್ ಸಿಂಗ್ ಗೆ ಕ್ಲೀನ್ ಚಿಟ್ ನೀಡಿಲ್ಲ; ಎನ್ಐಎ ಸ್ಪಷ್ಟನೆ
ಪಠಾಣ್ ಕೋಟ್ ದಾಳಿಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ...

Published On :
ನವದೆಹಲಿ: ಪಠಾಣ್ ಕೋಟ್ ದಾಳಿಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಪಂಜಾಬ್ ನ ಗುರುದಾಸ್ ಪುರ ಎಸ್ ಪಿ ಸಲ್ವಿಂದರ್ ಸಿಂಗ್ ಅವರಿಗೆ ಕ್ಲೀನ್ ಚಿಟ್ ನೀಡಿಲ್ಲ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ಶನಿವಾರ ಸ್ಪಷ್ಟಪಡಿಸಿದೆ.
ಸಲ್ವಿಂದರ್ ಸಿಂಗ್ ಅವರಿಗೆ ಕ್ಲೀನ್ ಚಿಟ್ ನೀಡಿಲ್ಲ ಎಂದು ರಾಷ್ಟ್ರೀಯ ತನಿಖಾ ದಳದ ಐಜಿ ಸಂಜೀವ್ ಸಿಂಗ್ ಅವರು ಇಂದು ಸ್ಪಷ್ಟಪಡಿಸಿದ್ದಾರೆ.
ಪ್ರಕರಣದ ತನಿಖೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು ಕಳೆದ 2 ವಾರಗಳಿಂದ ಪಂಜಾಬ್ ಪೊಲೀಸ್ ಅಧಿಕಾರಿ ಸಲ್ವಿಂದರ್ ಸಿಂಗ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಪದೇ ಪದೇ ಹೇಳಿಕೆ ಬದಲಿಸುತ್ತಿದ್ದ ಸಲ್ವಿಂದರ್ ಸಿಂಗ್ ಅವರ ವರ್ತನೆಯನ್ನು ಕಂಡ ಅಧಿಕಾರಿಗಳು ಅವರನ್ನು ಸುಳ್ಳುಪತ್ತೆ ಪರೀಕ್ಷೆಗೆ ಒಳಪಡಿಸಿದ್ದರು. ಆದರೆ ಸುಳ್ಳುಪತ್ತೆ ಪರೀಕ್ಷೆಯಲ್ಲೂ ಸಲ್ವಿಂದರ್ ಸಿಂಗ್ ಅವರ ವಿರುದ್ಧದ ಆರೋಪಗಳು ಸಾಬೀತಾಗಿಲ್ಲ ಎನ್ನಲಾಗಿತ್ತು.
ಸಲ್ವಿಂದರ್ ಸಿಂಗ್ ಅವರಿಗೂ ಮತ್ತು ಉಗ್ರರಿಗೂ ಸಂಪರ್ಕ ವಿತ್ತು ಎಂಬ ಆರೋಪದ ಹಿನ್ನಲೆಯಲ್ಲಿ ಅಧಿಕಾರಿಗಳು ಅವರ ಸ್ವಗ್ರಾಮ ಮತ್ತು ಮನೆಯಲ್ಲೂ ಸಹ ತಪಾಸಣೆ ನಡೆಸಿದ್ದರು. ಆದರೆ ಇವುಗಳಿಂದ ಸಲ್ವಿಂದರ್ ಸಿಂಗ್ ಉಗ್ರರೊಂದಿಗೆ ಯಾವುದೇ ವಿಧದಲ್ಲಿ ಸಂಬಂಧ ಹೊಂದಿದ್ದಾರೆ ಎಂಬುದಕ್ಕೆ ಪುರಾವೆ ಸಿಕ್ಕಿರಲಿಲ್ಲ. ಹಾಗಾಗಿ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ವರದಿ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


