16 ಮಹತ್ವದ ಒಪ್ಪಂದಗಳ ಸಹಿಗೆ ಸಾಕ್ಷಿಯಾದ ಚಂಡೀಘಡ
ಚಂಡೀಗಢದ ರಾಕ್ ಗಾರ್ಡನ್ನಲ್ಲಿ ನಡೆದ ವಾಣಿಜ್ಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡೆ ಅವರು 16 ಮಹತ್ವದ ಒಪ್ಪಂದಗಳಿಗೆ ಸಹಿ ಮಾಡಿದರು...

ಚಂಡೀಘಡ: ಚಂಡೀಗಢದ ರಾಕ್ ಗಾರ್ಡನ್ನಲ್ಲಿ ನಡೆದ ವಾಣಿಜ್ಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡೆ ಅವರು 16 ಮಹತ್ವದ ಒಪ್ಪಂದಗಳಿಗೆ ಸಹಿ ಮಾಡಿದರು.
ಫ್ರಾನ್ಸ್ ನ ಹಲವು ಉತ್ಪನ್ನಗಳಿಗೆ ಭಾರತದಲ್ಲಿ ಮಾರುಕಟ್ಟೆ ಕಲ್ಪಿಸುವ ಕುರಿತು ಮತ್ತು ಚಂಡೀಗಢ, ನಾಗಪುರ, ಪುದುಚೆರಿಗಳನ್ನು ಸ್ಮಾರ್ಟ್ ಸಿಟಿಯಾಗಿ ಪರಿವರ್ತಿಸುವ ಮಹತ್ವದ ಒಪ್ಪಂದಗಳು ಸೇರಿದಂತೆ ಸುಮಾರು 16 ಒಪ್ಪಂದಗಳಿಗೆ ಉಭಯ ನಾಯಕರು ಸಹಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಉಳಿದಂತೆ ನಗರಾಭಿವೃದ್ಧಿ ಕ್ಷೇತ್ರದಲ್ಲಿ ತಂತ್ರಜ್ಞಾನ ಸಹಕಾರ, ಭಾರತದ ವಿವಿಧ ರಾಜ್ಯಗಳಲ್ಲಿ ಪವನ ವಿದ್ಯುತ್ ಉತ್ಪಾದನೆ ಸೇರಿದಂತೆ ಹಲವು ಒಪ್ಪಂದಗಳಿಗೆ ಉಭಯ ನಾಯಕರು ಸಹಿ ಮಾಡಿದ್ದಾರೆ.
ಸಮ್ಮೇಳನದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಫ್ರಾನ್ಸ್ನ ಉತ್ಪನ್ನಗಳಿಗೆ ಭಾರತದಲ್ಲಿ ಮಾರುಕಟ್ಟೆ ಉತ್ತಮವಾಗಿದೆ. ಚಂಡೀಗಢ, ನಾಗಪುರ, ಪುದುಚೆರಿಗಳನ್ನು ಸ್ಮಾರ್ಟ್ ಸಿಟಿಯಾಗಿ ಪರಿವರ್ತಿಸಲು ಮುಂದಾದ ಫ್ರಾನ್ಸ್ನ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಭಾರತದಲ್ಲಿ 800 ದಶಲಕ್ಷ ಯುವಕರಿದ್ದಾರೆ. ಇವರ ಸಹಕಾರದೊಂದಿಗೆ ಉತ್ತಮ ಆಡಳಿತ ನೀಡುವ ಮೂಲಕ ಜಾಗತಿಕವಾಗಿ ಭಾರತ ಉನ್ನತ ಮಟ್ಟಕ್ಕೆ ಏರಲಿದೆ ಎಂದರು.
ಬಳಿಕ ಮಾತನಾಡಿದ ಫ್ರಾನ್ಸ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡ್ ಅವರು, ವಿಶ್ವದಲ್ಲೇ ಭಾರತ ವಾಣಿಜ್ಯೋದ್ಯಮದಲ್ಲಿ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಭಾರತದ ಜತೆ ಕಾರ್ಯನೀತಿ ಬಾಂಧವ್ಯವನ್ನು ವೃದ್ಧಿಸಿಕೊಳ್ಳುವುದು ನನ್ನ ಈ ಭೇಟಿಯ ಮುಖ್ಯ ಉದ್ದೇಶ. ಅಂದು ಮೋದಿ ಫ್ರಾನ್ಸ್ಗೆ ಭೇಟಿ ನೀಡಿದ ಸಂದರ್ಭ ತೆಗೆದುಕೊಂಡ ನಿರ್ಧಾರಗಳನ್ನು ಕಾರ್ಯರೂಪಕ್ಕೆ ತರುವುದು ಭೇಟಿಯ ಮೂಲ ಉದ್ದೇಶವಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


